Home ಅಪರಾಧ ಕಲಬುರಗಿನಲ್ಲಿ ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ

ಕಲಬುರಗಿನಲ್ಲಿ ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ

8
0
Kalaburagi | A youth commits suicide fearing to file a case of caste abuse

ಕಲಬುರಗಿ : ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ಹೊರ ವಲಯದ ಜಮೀನಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ಲಾಡ್ ಮುಗಳಿ ಗ್ರಾಮದ ನಿಖಿಲ್ ಪೂಜಾರಿ(23) ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಕಮಲಾಪುರ ತಾಲೂಕಿನ ಮಹಾಗಾಂವ ಸಮೀಪದ ಲಾಡ್ ಮುಗಳಿಯಲ್ಲಿ ಜಾತ್ರೆಯ ಸಂದರ್ಭದಲ್ಲಿ ಯುವಕರ ಮಧ್ಯೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ನಿಖಿಲ್ ಸೇರಿದಂತೆ 14 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ (ಅಟ್ರಾಸಿಟಿ) ಮೊಕದ್ದಮೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

ಪೊಲೀಸರು ಇವರೆಲ್ಲರನ್ನು ಠಾಣೆಗೆ ಕರೆಸಿ ಸೌಹಾರ್ದ ಮಾತುಕತೆ ನಡೆಸಿ ಶಾಂತಿ ಕಾಪಾಡಲು ಪ್ರಯತ್ನಿಸಿದ್ದರು. ನಿಖಿಲ್ ಕೈಯಿಂದ ಒಂದು ಲಕ್ಷ ಇಪ್ಪತ್ತು ಸಾವಿರ ರೂಪಾಯಿ ಪಡೆದು ಸಂಧಾನ ಮಾತುಕತೆ ಮಾಡುವುದಾಗಿ ಯುವಕರು ಒಪ್ಪಿಕೊಂಡಿದ್ದರು ಎನ್ನಲಾಗಿದೆ.

ಮರುದಿನ ಹಣದೊಂದಿಗೆ ಠಾಣೆಯಲ್ಲಿ ಕಾದರೂ ಬರದೆ ಇದ್ದಾಗ ಮನೆಗೆ ವಾಪಸಾದ ನಿಖಿಲ್ ಗೆ ಜೀವ ಬೆದರಿಕೆ ಒಡ್ಡಿದ ಪರಿಣಾಮವಾಗಿ ಭಯದಿಂದ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here