Home Uncategorized ಕಲಬುರಗಿ: ತನ್ನಿಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಂದೆ

ಕಲಬುರಗಿ: ತನ್ನಿಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಂದೆ

47
0

ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ  ನಡೆದಿದೆ. ಕಲಬುರಗಿ: ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ  ನಡೆದಿದೆ.

ಮೃತರನ್ನು 36 ವರ್ಷದ ಹಣಮಂತ ಮಕ್ಕಳಾದ 9 ವರ್ಷದ ಓಕಾಂ ಹಾಗೂ 6 ವರ್ಷದ ಅಕ್ಷತಾ ಎಂದು ಗುರುತಿಸಲಾಗಿದೆ.

ಹಣಮಂತ ಪತ್ನಿ ಮಕ್ಕಳೊಂದಿಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದರು. ಆದರೆ ನಿನ್ನೆ ರಾತ್ರಿ ಮಕ್ಕಳೊಂದಿಗೆ ಸ್ವಗ್ರಾಮಕ್ಕೆ ಬಂದಿದ್ದು ನಿನ್ನೆಯೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಮತ್ತು ಮಕ್ಕಳ ಮೃತದೇಹ ಇಂದು ಪತ್ತೆಯಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ.

ಇದನ್ನೂ ಓದಿ: ಶಿವಮೊಗ್ಗ: ಈಜಾಡಲು ತುಂಗಾ ನದಿಗೆ ಇಳಿದಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು

ಘಟನಾ ಸ್ಥಳಕ್ಕೆ ಕುಂಚಾವರಂ ಪೊಲೀಸರು ಭೇಟಿ ನೀಡಿದ್ದು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here