Home ಕರ್ನಾಟಕ ಕಲಬುರಗಿ: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ನಿಧನ

ಕಲಬುರಗಿ: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ನಿಧನ

25
0

ಕಲಬುರಗಿ: ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಅವರು ಮೇ 6 ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 79 ವರ್ಷ ವಯಸ್ಸಾಗಿತ್ತು. 1983 ರಿಂದ 1985 ವರೆಗೆ ಎರಡೂವರೆ ವರ್ಷ ಶಾಸಕರಾಗಿದ್ದರು.

ಮೃತರು ಸಹೋದರ, ಸಹೋದರಿಯರು, ಪತ್ನಿ, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮಧ್ಯಾಹ್ನ 3.30 ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here