Home Uncategorized ಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು- ಡಿಕೆಶಿ

ಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು- ಡಿಕೆಶಿ

16
0

ಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ರಾಜಕೀಯ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು: ಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ರಾಜಕೀಯ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಕಾನೂನನ್ನು  ರಕ್ಷಿಸಬೇಕು, ಮೂರ್ನಾಲ್ಕು ಸ್ಥಳಗಳಲ್ಲಿ, ಇಡೀ ಪೊಲೀಸ್ ಇಲಾಖೆ ಸಿಬ್ಬಂದಿ ಸಮವಸ್ತ್ರದ ಬದಲು ರಾಜಕೀಯ ಅಜೆಂಡಾ ಪ್ರತಿನಿಧಿಸುವ ಬಟ್ಟೆ ಧರಿಸಿ ಫೋಟೋಗಳಿಗೆ ಪೋಸ್ ನೀಡಿದ್ದರು. ನಿನ್ನೆ (ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ) ಇದನ್ನು ಪ್ರಸ್ತಾಪಿಸಿದ್ದೇನೆ. ಇದನ್ನು ಮಾಡಿ ಅಂತಾ ಸಂವಿಧಾನ ಅಥವಾ ಕಾನೂನು ಹೇಳಿಲ್ಲ. ಕರ್ನಾಟಕದಲ್ಲಿ ಪೊಲೀಸ್ ಇಲಾಖೆಗೆ ದೊಡ್ಡ ಇಮೇಜ್ ಇದೆ ಎಂದರು. 

ಇದನ್ನೂ ಓದಿ: ಮುಖ್ಯಮಂತ್ರಿಗಳಿಂದಲೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ: ಡಿ.ಕೆ.ಶಿವಕುಮಾರ್

ಪೊಲೀಸ್ ಪಡೆ ಮತ್ತು ನೈತಿಕ ಪೊಲೀಸ್ ಗಿರಿ ಕೇಸರಿಕರಣಕ್ಕೆ ಬೆಂಬಲಿಸುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ಖಂಡಿಸಿದ ಡಿಕೆ ಶಿವಕುಮಾರ್ ಕಾನೂನನ್ನು ಕೈಗೆ ತೆಗೆದುಕೊಳ್ಳುವುದಕ್ಕೆ ತಮ್ಮ ಸರ್ಕಾರ ಅವಕಾಶ ನೀಡಲ್ಲ ಎಂದು ಪ್ರತಿಪಾದಿಸಿದರು.

ಆದರೆ ಅವರು ಪೊಲೀಸ್ ಅಧಿಕಾರಿಗಳ ಮೇಲೆ ಪ್ರಾಬಲ್ಯ ಸಾಧಿಸಲು ಪ್ರಾರಂಭಿಸಿದ್ದಾರೆ ಎಂಬ ಮಾಜಿ ಗೃಹ ಸಚಿವ ಆರಗ ಜನೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಚುನಾವಣೆಯಲ್ಲಿ ಆರಗ ಜ್ಞಾನೇಂದ್ರ  ಮತ್ತು ಅವರ ಸರ್ಕಾರಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ, ಅವರ ಹೇಳಿಕೆಗಳಿಗೆ ಉತ್ತರಿಸಲು ನನಗೆ ಸಮಯವಿಲ್ಲ ಎಂದು ಅವರು ಹೇಳಿದರು.

ಭ್ರಷ್ಟಾಚಾರದ ವಿಷಯಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಅವರಿಗೆ ಸಮನ್ಸ್ ನೀಡಿದ್ದನ್ನು ನೆನಪಿಸಿಕೊಂಡ ಡಿಕೆ ಶಿವಕುಮಾರ್,  ಎಷ್ಟು ಜನರಿಗೆ ಸಮನ್ಸ್ ನೀಡಲಾಗಿತ್ತು. ಇತರರನ್ನು ಏಕೆ ಕರೆದಿಲ್ಲ? ಅವರು ದಲಿತ ಎಂಬ ಕಾರಣಕ್ಕೆ ಅವರನ್ನು ಗುರಿ ಮಾಡಲಾಗಿತ್ತೆ? ಎಂದು ಪ್ರಶ್ನಿಸಿದ ಅವರು, ಪೊಲೀಸರು ಕಾನೂನಿನ ಪ್ರಕಾರ ಕೆಲಸ ಮಾಡಬೇಕು, ದೇಶ ಮೊದಲು ಎಂದರು. 

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿಯೊಬ್ಬರು ಒಎಂಆರ್ ಶೀಟ್‌ಗಳನ್ನು ತಯಾರಿಸುವಲ್ಲಿ ತೊಡಗುತ್ತಾರೆ ಎಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆ ಯಾವ ಮಟ್ಟಕ್ಕೆ ಕುಸಿದಿತ್ತು ಎಂಬುದನ್ನು ಎಂದು ಊಹಿಸಿ? ಎಂದು ಶಿವಕುಮಾರ್ ಸುದ್ದಿಗಾರರನ್ನು ಕೇಳಿದರು. 

LEAVE A REPLY

Please enter your comment!
Please enter your name here