Home Uncategorized ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ: ಮುಖ, ತಲೆಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ: ಮುಖ, ತಲೆಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

25
0

ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ. ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ.

ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.

ತಡರಾತ್ರಿ ಎರಡು ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ನನ್ನ ಹತ್ಯೆಗೆ ಲಷ್ಕರ್‌ ಜೊತೆ ಪಿಎಫ್‌ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿತು: ಈಶ್ವರಪ್ಪ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ್ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಾಲಕನಿಗೆ ಆಕಾಶವಾಣಿ ಕೇಂದ್ರ ಬಳಿ ರಸ್ತೆಯ ಮಧ್ಯೆ ಇರುವ ಗುಂಡಿ ಕಾಣದೆ ಕಾರು ಗುಂಡಿಯಲ್ಲಿ ಸಿಲುಕಿ ಸ್ಕಿಡ್ ಆಗಿದೆ. ಇದರಿಂದ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here