Home ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ಅರ್ಹ ವ್ಯಕ್ತಿ ಇಲ್ಲ : ಬಿ. ಎಸ್ ಯಡಿಯೂರಪ್ಪ

ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ಅರ್ಹ ವ್ಯಕ್ತಿ ಇಲ್ಲ : ಬಿ. ಎಸ್ ಯಡಿಯೂರಪ್ಪ

23
0

ಹೊಸದಿಲ್ಲಿ: ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಯಾರಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯಾತ್ಮಕವಾಗಿ ಪ್ರಶ್ನಿಸಿದ್ದಾರೆ.

ಸದಾನಂದ ಗೌಡ ಅವರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬಿಎಸ್ ವೈ, ಕಾಂಗ್ರೆಸ್ ನಲ್ಲಿ ಸರಿಯಾದ ಅಭ್ಯರ್ಥಿಗಳಿಲ್ಲ. ಆದ್ದರಿಂದ ಬಿಜೆಪಿಯ ಅತೃಪ್ತ ನಾಯಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಲೋಕಸಭೆ ಚುನಾವಣೆ ಬಳಿಕ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೇಳಗಿಳಿಯಬೇಕಾಗುತ್ತೆ ಎಂಬ ಈ ಶ್ವರಪ್ಪ ಅವರ ಹೇಳಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ಬಿಜೆಪಿ ಉತ್ತಮ ಬೆಳವಣಿಗೆ ಕಂಡಿದೆ. ತಮ್ಮ ಮಗನಿಗೆ ಸೀಟು ಸಿಕ್ಕಿಲ್ಲ ಎಂಬ ಕಾರಣಕ್ಕೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಬೇಜವಬ್ದಾರಿ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ. ಜನ ಉತ್ತರ ಕೊಡ್ತಾರೆ ಎಂದರು.

ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ನಾನೇನೂ ಪ್ರತಿಕ್ರಿಯಿಸುವುದಿಲ್ಲ. ಆ ರೀತಿ ತೀರ್ಮಾನ ತೆಗೆದುಕೊಳ್ಳಬೇಡಿ ಎಂದು ಎಲ್ಲರೂ ಹೇಳಿದ್ದಾರೆ. ಅಂತಿಮವಾಗಿ ಅವರು ಏನು ಮಾಡುತ್ತಾರೆ ನೋಡೋಣ ಎಂದರು.

ಸೀಟು ಹಂಚಿಕೆ ಬಗ್ಗೆ ಜೆಡಿಎಸ್ ಅಸಮಾಧಾನಗೊಂಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್ ಮುಖಂಡರು ನಮ್ಮ ಜೊತೆಗೆ ಇರ್ತಾರೆ. ಬಿಜೆಪಿ ಹೈಕಮಾಂಡ್ ನ ಅಂತಿಮ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡುತ್ತೇವೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮಾರ್ಚ್ 22 ರಂದು ಘೋಷಣೆಯಾಗುತ್ತದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಅನುಕೂಲ ಆಗಿದೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಾಗುತ್ತೆ. ಅಮಿತ್ ಶಾ, ಮೋದಿ ಜೊತೆಗೆ ಹೆಚ್. ಡಿ ದೇವೇಗೌಡರು ಸಂಪರ್ಕದಲ್ಲಿದ್ದಾರೆ ಎಂದರು.

ಪ್ರಧಾನಿ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಮಿತ್ ಶಾ , ಜೆ.ಪಿ ನಡ್ಡಾ ಅವರ ಜೊತೆ ಐದು ಕ್ಷೇತ್ರಗಳ ಬಗ್ಗೆ ಚರ್ಚಿಸಿದ್ದೇವೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದು ತಿಳಿಸಿದರು.

ಜೆ.ಸಿ.ಮಾಧುಸ್ವಾಮಿ ಸಹಕಾರದಿಂದ ನಾವು ಚುನಾವಣೆ ಗೆಲ್ಲಬೇಕಿದೆ. ಕರಡಿ ಸಂಗಣ್ಣ ಜೊತೆಗೆ ಮಾತನಾಡಿದ್ದೇನೆ. ಅವರು ನಿಷ್ಠಾವಂತ ಮುಖಂಡರು. ಅವರು ಬೇರೆ ಯಾವ ನಿರ್ಧಾರ ತೆಗೆದುಕೊಳ್ಳಬಾರದು. ಮುಂದೆ ಅವರಿಗೆ ಸೂಕ್ತ ಸ್ಥಾನ ಮಾನ ನೀಡಲಾಗವುದು. ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು. 

LEAVE A REPLY

Please enter your comment!
Please enter your name here