ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ : ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಆದರೆ, ಅದಕ್ಕಾಗಿಯೆ ಸರಕಾರ ಬೀಳಲಿದೆ ಎಂದು ಭಾವಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ನಮ್ಮಲ್ಲಿ ಜಗಳ ಇರುವುದು ನಿಜ. ಆದರೆ, ಅದೆಲ್ಲ ಪಕ್ಷದ ಆಂತರಿಕ ವಿಚಾರ. ಅದನ್ನು ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳಿಗೆ ಹೋಲಿಕೆ ಮಾಡೋದು ಸರಿಯಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಇನ್ನೂ 4 ವರ್ಷ ಕಾಂಗ್ರೆಸ್ ಸರಕಾರವೇ ಅಧಿಕಾರದಲ್ಲಿ ಇರಲಿದೆ. ಈ ಸರಕಾರ ಪತನವಾಗುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಮಾತನಾಡಲು ಸ್ವಾತಂತ್ರ್ಯವಿದೆ. ಭಿನ್ನಮತ ಇದ್ದ ಮಾತ್ರಕ್ಕೆ ಸರಕಾರ ಬೀಳಿಸಲು ಆಗುತ್ತದೆಯೇ? ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
ಅಭಿವೃದ್ಧಿ, ವರ್ಗಾವಣೆ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು, ಅಸಮಾಧಾನ ಇರೋದು ಸಹಜ. ಆದರೆ, ಆ ಕಾರಣಗಳಿಗೆಲ್ಲ ಸರಕಾರ ಬೀಳುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
