ನೂತನ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿರುವ ಸುಧಾಕರ್ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ. ಬೆಂಗಳೂರು: ನೂತನ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿರುವ ಸುಧಾಕರ್ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ.
ಮಾಜಿ ಸಚಿವ ಸುಧಾಕರ್ ಅವರು ಸಲ್ಲಿಕೆ ಮಾಡಿರುವ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ಜೂನ್ 4ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಸಾರ್ವಜನಿಕವಾಗಿ ಮಾನಹಾನಿ ಮಾಡುವ ರೀತಿಯಲ್ಲಿ ಮಾತನಾಡುವುದರ ಜೊತೆಗೆ, ಸೋಶಿಯಲ್ ಮೀಡಿಯಾದಲ್ಲಿ ಹಾಗೂ ಮಾಧ್ಯಮಗಳ ಸಂದರ್ಶನದಲ್ಲಿ ಮಾನಹಾನಿ ರೀತಿ ಮಾತನಾಡುತ್ತಿದ್ದಾರೆ. ಈ ಮೂಲಕ ಘನತೆಗೆ ತೇಜೋವಧೆ ಮಾಡುತ್ತಾ ಇದ್ದಾರೆ. ಹೀಗಾಗಿ ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆ ಕೈಗೊಳ್ಳಿ ಎಂದಿದ್ದಾರೆ. ಅಲ್ಲದೆ ತನ್ನ ವಿರುದ್ಧ ಮಾತನಾಡದಂತೆ ನಿರ್ಬಂಧ ಹೇರಲು ಸುಧಾಕರ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ನೂತನ ಶಾಸಕ ಪ್ರದೀಪ್ ಈಶ್ವರ್ ಗೆ ಆಘಾತ: ಸಾಕು ತಾಯಿ ರತ್ನಮ್ಮ ವಿಧಿವಶ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆ. ಸುಧಾಕರ್ ಅವರನ್ನು ಮಣಿಸಿ ಪ್ರದೀಪ್ ಈಶ್ವರ್ ಶಾಸಕರಾಗಿದ್ದಾರೆ. ತಮ್ಮ ತೆಲುಗು ಡೈಲಾಗ್‍ಗಳಿಂದಲೇ ಚುನಾವಣಾ ಪ್ರಚಾರದ ವೇಳೆ ಪ್ರದೀಪ್ ಈಶ್ವರ್ ಗಮನ ಸೆಳೆದಿದ್ದರು. ಸದ್ಯ ಅವರ ಡೈಲಾಗ್ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.