Home ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ: ರಾಮಲಿಂಗಾ ರೆಡ್ಡಿ

14
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್‌ ನಲ್ಲಿ ಸುಮಾರು ₹5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ.

ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು… pic.twitter.com/Yuj1fznS6v

— Ramalinga Reddy (@RLR_BTM) June 8, 2024

 

LEAVE A REPLY

Please enter your comment!
Please enter your name here