Home Uncategorized ಕಾಂಗ್ರೆಸ್ ಸರ್ಕಾರ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಿದೆ: ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಿದೆ: ಬೊಮ್ಮಾಯಿ

33
0

ರಾಜ್ಯದಲ್ಲಿ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಆರೋಪಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ನಾವು ಕೇಸರಿಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಇಲಾಖೆಗೆ ಎಚ್ಚರಿಕೆ ನೀಡಿದ್ದರು.

ಇದನ್ನು ಓದಿ: ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ಖಡಕ್ ಸೂಚನೆ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, “ಕರ್ನಾಟಕ ಪೊಲೀಸರಿಗೆ ಇಡೀ ದೇಶದಲ್ಲಿ ಒಳ್ಳೆಯ ಹೆಸರಿದೆ ಮತ್ತು ಪೊಲೀಸರು ಎಂದಿಗೂ ಕೇಸರಿಕರಣ ಮಾಡಿಲ್ಲ. ಆದರೆ ಸಿಎಂ, ಡಿಸಿಎಂ ಇಬ್ಬರೂ ತಮ್ಮ ಅಜೆಂಡಾವನ್ನು ಜಾರಿಗೆ ತರಲು ನಿರ್ಧರಿಸಿದ್ದಾರೆ ಮತ್ತು ಅದರ ಭಾಗವಾಗಿ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಓಲೈಕೆ ರಾಜಕಾರಣ ನಡೆಯುತ್ತಿದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕೇಸರಿ ಶಾಲಿನ ಮೇಲೆ ಯಾವುದೇ ನಿಷೇಧವಿಲ್ಲ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ ನಡೆಸಿದರು.

ಕರ್ತವ್ಯದ ವೇಳೆ ಯಾರೂ ಕೇಸರಿ ಉಡುಗೆ ತೊಟ್ಟಿಲ್ಲ, ಕರ್ತವ್ಯದ ನಂತರ ಯಾವುದೇ ಡ್ರೆಸ್ ಹಾಕಿಕೊಳ್ಳಬಹುದು. ಡಿ.ಕೆ.ಶಿವಕುಮಾರ್ ಅವರು ಪೊಲೀಸರ ವಿರುದ್ಧ ದ್ವೇಷಪೂರಿತ ಭಾಷಣ ಮಾಡುತ್ತಿರುವುದು ಸರಿಯಲ್ಲ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಪೊಲೀಸ್ ಅಧಿಕಾರಿಗಳ ಮೇಲೆ ಸೇಡು ತೀರಿಸಿಕೊಳ್ಳುವ ಧ್ಯೇಯದಲ್ಲಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಘನತೆ ತರುವುದಿಲ್ಲ. ಅವರ ನಿಲುವು ಬದಲಾಗಬೇಕು ಎಂದು ಹೇಳಿದರು.

LEAVE A REPLY

Please enter your comment!
Please enter your name here