Home ಕರ್ನಾಟಕ ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ‌ಆತ್ಮಹತ್ಯೆ

ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ‌ಆತ್ಮಹತ್ಯೆ

24
0

ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.

ಬಾಗಲಕೋಟೆ ಮೂಲದ ಜ್ಯೋತಿ (28) ಮೃತ ಮಹಿಳಾ ಪೊಲೀಸ್ ಸಿಬ್ಬಂದಿಯಾಗಿದ್ದು‌, ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿ ರಾತ್ರಿ ಕ್ವಾಟ್ರಸ್ ಗೆ ಮರಳಿದ್ದ ಅವರು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.

ಜ್ಯೋತಿ ಅವರ ಪತಿ ಕೆಎಸ್ಸಾರ್ಟಿಸಿಯ ಸಿಬಂದಿಯಾಗಿದ್ದು, ಬೆಳಿಗ್ಗೆಯೇ ಕರ್ತವ್ಯಕ್ಕೆ ಹೋಗಿದ್ದರು. 

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾಪು‌ ಎಸ್ಸೈ ಅಬ್ದುಲ್ ಖಾದರ್ ಸ್ಥಳದಲ್ಲಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

LEAVE A REPLY

Please enter your comment!
Please enter your name here