ಕಾಫಿ ಎಸ್ಟೇಟ್‌ನಲ್ಲಿ ದಲಿತ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಚಿಕ್ಕಮಗಳೂರಿನಲ್ಲಿ ಮೂವರನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು: ಕಾಫಿ ಎಸ್ಟೇಟ್‌ನಲ್ಲಿ ದಲಿತ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಚಿಕ್ಕಮಗಳೂರಿನಲ್ಲಿ ಮೂವರನ್ನು ಬಂಧಿಸಲಾಗಿದೆ.
ಮೃತರನ್ನು 55 ವರ್ಷದ ಜಯಮ್ಮ ಎಂದು ಗುರುತಿಸಲಾಗಿದ್ದು, ಆಕೆ ಅನಾಥೆ ಎಂದು ಪೊಲೀಸರು ತಿಳಿಸಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಶಿವಮೊಗ್ಗ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ; 21 ವರ್ಷದ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಪೊಲೀಸರ ಮೂಲಗಳ ಪ್ರಕಾರ, ಒಂದು ವಾರದ ಹಿಂದೆ ಸಿದ್ದಾಪುರದ ಸುಪ್ರೀಂ ಕಾಫಿ ಎಸ್ಟೇಟ್‌ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರೊಬ್ಬರು ಚಿಕ್ಕಮಗಳೂರು ಎಸ್‌ಪಿ ಉಮಾ ಪ್ರಶಾಂತ್ ಅವರಿಗೆ ದೂರವಾಣಿ ಕರೆ ಮಾಡಿದ ನಂತರವಷ್ಟೇ ಬೆಳಕಿಗೆ ಬಂದಿದೆ.
ಏಳು ದಿನಗಳ ಹಿಂದೆ ದಲಿತ ಕಾರ್ಮಿಕ ಮಹಿಳೆಯನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಬೂದಿ ಮಾಡಲಾಗಿದೆ ಎಂದು ಕರೆ ಮಾಡಿದವರು ತಿಳಿಸಿದ್ದರು. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದಾಗ ಮಧ್ಯವಯಸ್ಕ ಮಹಿಳೆ ಸುಟ್ಟು ಕರಕಲಾಗಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ತೆರವು ಕಾರ್ಯಾಚರಣೆಗೆ ಮಾಜಿ ಶಾಸಕರ ಅಡ್ಡಿ: ಬುಲ್ಡೋಜರ್ ಕೀ ಕಸಿದುಕೊಂಡ ನಂದೀಶ್ ರೆಡ್ಡಿ!
ಮಹಿಳೆಯನ್ನು ಗುಂಡಿಕ್ಕಿ ಕೊಂದ ನಂತರ ಆಕೆಯ ದೇಹವನ್ನು ಸ್ಥಳದಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಪ್ರತ್ಯೇಕ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಬೆಂಕಿ ಹಚ್ಚಲಾಗಿದೆ ಎಂದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಫಿ ಎಸ್ಟೇಟ್ ಮಾಲೀಕ ಹೆಗ್ಗಡೇಗೌಡ, ಅವರ ಪುತ್ರ ಹಾಗೂ ಕಾರ್ಮಿಕ ನಾಗಪ್ಪ ಅವರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.