ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಜೆಪಿ ಮುಖಂಡ ಹಾಗೂ ವಕೀಲ ನಾಗರಾಜ ನಾಯಕ್ ಅವರು ಬುಧವಾರ ಕಾರವಾರ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಕಾರವಾರ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಜೆಪಿ ಮುಖಂಡ ಹಾಗೂ ವಕೀಲ ನಾಗರಾಜ ನಾಯಕ್ ಅವರು ಬುಧವಾರ ಕಾರವಾರ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.
ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸಿ ನಾಗರಾಜ ನಾಯಕ್ ಅವರು ದೂರು ದಾಖಲಿಸಿದ್ದರು.
ಈ ಸಂದರ್ಭದಲ್ಲಿ ಕಾರವಾರ ಬಿಜೆಪಿ ಮಂಡಲ ಅಧ್ಯಕ್ಷ ನಾಗೇಶ ಕುರಡೇಕರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ವಿವಿಧ ನಾಯಕರ ದಾಳಿಯಿಂದ ವಿಚಲಿತರಾಗದ ತಮಿಳುನಾಡು ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರು, ನಾನು ಮೊನ್ನೆ ಕಾರ್ಯಕ್ರಮವೊಂದರಲ್ಲಿ ಏನು ಹೇಳಿದ್ದೇನೋ ಮತ್ತೆ ಮತ್ತೆ ಅದನ್ನೇ ಹೇಳುತ್ತೇನೆ. ಕೇವಲ ಹಿಂದೂ ಧರ್ಮವನ್ನಷ್ಟೇ ಅಲ್ಲ, ಎಲ್ಲಾ ಧರ್ಮಗಳಲ್ಲಿನ ಜಾತಿ ತಾರತಮ್ಯವನ್ನು ಖಂಡಿಸುತ್ತೇನೆ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿ: ‘ಧಾರ್ಮಿಕ ಭಾವನೆಗಳಿಗೆ ಧಕ್ಕೆ’: ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಕರಣ ದಾಖಲು
‘ಸನಾತನ ಧರ್ಮ’ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
‘ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯು, ಮಲೇರಿಯಾ ಅಥವಾ ಕೊರೊನಾವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಬದಲಿಗೆ ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಅವರು ಶನಿವಾರ (ಸೆಪ್ಟಂಬರ್ 2) ಹೇಳಿದ್ದಾರೆ.
ಇದನ್ನೂ ಓದಿ: ಸನಾತನ ಧರ್ಮ ಕುರಿತು ಹೇಳಿಕೆ: ಬನಶಂಕರಿ ಠಾಣೆಯಲ್ಲಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು
ಸನಾತನ ಧರ್ಮದ ಕುರಿತು ಉದಯನಿಧಿಯವರ ಹೇಳಿಕೆಯು ರಾಷ್ಟ್ರದಾದ್ಯಂತ ಭಾರಿ ವಿವಾದವನ್ನು ಹುಟ್ಟುಹಾಕಿದೆ. ಅವರ ಹೇಳಿಕೆಯನ್ನು ಹಲವು ಬಿಜೆಪಿ ನಾಯಕರು ಮತ್ತು ಹಿಂದೂ ಸಾಧು-ಸಂತರು ತೀವ್ರವಾಗಿ ಟೀಕಿಸಿದ್ದಾರೆ. ಎಂಕೆ ಸ್ಟಾಲಿನ್ ಪುತ್ರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಮುಂಬೈನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಇಂತಹ ಕಾರ್ಯಸೂಚಿಯನ್ನು ಚರ್ಚಿಸಲಾಗಿದೆ ಎಂದು ಕೇಸರಿ ಪಕ್ಷದ ನಾಯಕರು ಉದಯನಿಧಿಯವರ ಹೇಳಿಕೆಗೆ ಇಂಡಿಯಾ ಒಕ್ಕೂಟವನ್ನು ದೂಷಿಸಿದ್ದಾರೆ.