ಹೆಬ್ರಿ, ಜ.೧: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಾರ ಗ್ರಾಮದ ಕನ್ಯಾನ ಶಾಲೆಯ ಬಳಿ ಡಿ.೩೧ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಜಯಂತ ಬೋರೋ(25) ಎಂದು ಗುರುತಿಸಲಾಗಿದೆ. ಕನ್ಯಾನ ಕಡೆಯಿಂದ ಶಿವಪುರ ಕಡೆಗೆ ಬರುತ್ತಿದ್ದ ಕಾರು, ರಸ್ತೆ ಬದಿ ಇತರರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಜಯಂತ್ ಅವರಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡಿದ್ದ ಇವರು ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.