Home Uncategorized ಕಾರ್ಯರೂಪಕ್ಕೆ ತರಲು ಸಾಧ್ಯವಾಗುವ ಕಾರ್ಯಕ್ರಮಗಳನ್ನು ಮಾತ್ರ ನಾವು ಘೋಷಣೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾರ್ಯರೂಪಕ್ಕೆ ತರಲು ಸಾಧ್ಯವಾಗುವ ಕಾರ್ಯಕ್ರಮಗಳನ್ನು ಮಾತ್ರ ನಾವು ಘೋಷಣೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

12
0

ಬೆಂಗಳೂರು, ಫೆ. 10: ನಾವು ಕಾರ್ಯರೂಪಕ್ಕೆ ತರಲು ಸಾಧ್ಯವಾಗುವ ಕಾರ್ಯಕ್ರಮಗಳನ್ನು ಮಾತ್ರ ಘೋಷಣೆ ಮಾಡುತ್ತೇವೆ. ಈ ಹಿಂದೆ ನಾವು ಮಾಡಿದ ಗ್ಯಾರಂಟಿ ಪ್ರಣಾಳಿಕೆ ದೇಶಕ್ಕೆ ಮಾದರಿಯಾಗಿತ್ತು. ಅದನ್ನು ನಾವು ಕಾರ್ಯರೂಪಕ್ಕೆ ತಂದಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಗರದ ಖಾಸಗಿ ಹೋಟೇಲ್ ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ನಾವು ರಾಷ್ಟ್ರದ ಭದ್ರತೆ, ಎಲ್ಲಾ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವುದನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಮಾಡುತ್ತೇವೆ. ಇಂಡಿಯಾ ಒಕ್ಕೂಟ ಕೂಡ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಿದೆ. ಎಲ್ಲರೂ ಒಟ್ಟಾಗಿ ದೇಶದಲ್ಲಿ ಬದಲಾವಣೆ, ಕ್ರಾಂತಿ ತರಲು ಹೋರಾಟ ಮಾಡುತ್ತೇವೆ ಎಂದರು.

ಸಂಸದ ಡಿ ಕೆ ಸುರೇಶ್ ಅವರಿಗೆ ಗುಂಡಿಕ್ಕುವ ಸಂಬಂಧ ತಾವು ನೀಡಿದ್ದ ಹೇಳಿಕೆಗೆ ಕ್ಷಮೆ ಕೇಳುವುದಿಲ್ಲ ಎಂಬ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, “ ಈಶ್ವರಪ್ಪ ಅವರಿಗೆ ಕ್ಷಮೆ ಕೇಳಿ ಎಂದು ಯಾರೂ ಹೇಳಿಲ್ಲ. ಸದನದಲ್ಲಿ ನಮ್ಮ ತಂದೆ ಬಗ್ಗೆ ಮಾತನಾಡಿದ್ದರು. ಅದಕ್ಕೆ ಒಂದು ಸುತ್ತಿನ ಸೆಟ್ಲಮೆಂಟ್ ಮಾಡಿದ್ದೇವೆ. ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲ್ ಮೆಂಟ್ ಆಗಿದೆ. ” ಎಂದು  ತಿರುಗೇಟು ನೀಡಿದರು.

“ಈಶ್ವರಪ್ಪ ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ. ಅವರ ಹೇಳಿಕೆಗೆ ನಡುಗುವ ರಕ್ತ ಡಿ ಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಪೂರ್ವಜರಾದ ಕೆಂಪೇಗೌಡರ ಇತಿಹಾಸ ಗೊತ್ತಿದೆಯೇ? ನಮಗೆ ನಮ್ಮದೇ ಆದ ಇತಿಹಾಸವಿದೆ. ನಾವು ಕಿವಿ ಮೇಲೆ ಹೂವು ಇಟ್ಟುಕೊಂಡು ರಾಜಕಾರಣ ಮಾಡಲು ಬಂದಿಲ್ಲ” ಎಂದರು.

 

LEAVE A REPLY

Please enter your comment!
Please enter your name here