Home Uncategorized ಕಾವೇರಿ ಬಿಕ್ಕಟ್ಟು: ಬಿಜೆಪಿ ನಾಯಕರ ಪ್ರತಿಭಟನೆ; ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ತಮಿಳುನಾಡಿನ ಏಜೆಂಟರು ಎಂದ ಬಿಎಸ್‌ವೈ

ಕಾವೇರಿ ಬಿಕ್ಕಟ್ಟು: ಬಿಜೆಪಿ ನಾಯಕರ ಪ್ರತಿಭಟನೆ; ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ತಮಿಳುನಾಡಿನ ಏಜೆಂಟರು ಎಂದ ಬಿಎಸ್‌ವೈ

26
0

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು. ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.

#WATCH | BJP leaders hold protest against Karnataka government over Cauvery water release to Tamil Nadu, in Bengaluru pic.twitter.com/al6MCMPLuC
— ANI (@ANI) September 27, 2023

ಈ ವೇಳೆ ಮಾತನಾಡಿದ ಅವರು, ತಮಿಳುನಾಡು ಏಜೆಂಟರಂತೆ ವರ್ತಿಸಬಾರದು ಎಂಬುದು ನಮ್ಮ ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ತಿಳಿದಿರಬೇಕು. ವಾಸ್ತವ ಸಂಗತಿಗಳನ್ನು ಅರಿತುಕೊಳ್ಳಬೇಕು. ನಮ್ಮ ಬಹುತೇಕ ಎಲ್ಲಾ ಜಲಾಶಯಗಳಲ್ಲಿ ನೀರಿಲ್ಲ ಮತ್ತು ಕುಡಿಯುವ ಉದ್ದೇಶಕ್ಕೂ ಇರುವ ನೀರು ನಮಗೆ ಸಾಕಾಗುತ್ತಿಲ್ಲ. ಪ್ರಧಾನಿ ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದು, ಅವರು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಮತ್ತು ಜನಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಮಿಳುನಾಡಿನ ಏಜೆಂಟರಂತೆ ವರ್ತಿಸುತ್ತಿರುವುದರಿಂದ ಕರ್ನಾಟಕವು ಬಿಕ್ಕಟ್ಟು ಎದುರಿಸುತ್ತಿದೆ ಎಂದು ದೂರಿದರು.

#WATCH | Cauvery water sharing issue | BJP leader BS Yediyurappa says, “Our CM Siddaramaiah and Shivkumar, they must know, that they should not behave like Tamil Nadu agents. They must realise the actual facts. In almost all our reservoirs water is not at all sufficient for even… pic.twitter.com/eAeBmbxnpE
— ANI (@ANI) September 27, 2023

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ, ‘ರಾಜ್ಯ ಸರ್ಕಾರ ರೈತರ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ. ಅವರು ಈಗ ರಾಜ್ಯದ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಅದಕ್ಕಾಗಿಯೇ ಜೆಡಿಎಸ್ ಮತ್ತು ಬಿಜೆಪಿ ಪ್ರತಿಭಟನೆ ನಡೆಸುತ್ತಿವೆ’ ಎಂದರು.

ರಾಜ್ಯ ಸರ್ಕಾರ ವಿಫಲ: ತೇಜಸ್ವಿ ಸೂರ್ಯ

ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಕರ್ನಾಟಕ ಕೂಡಲೇ ನಿಲ್ಲಿಸಬೇಕು ಎಂದು ಬೆಂಗಳೂರು ದಕ್ಷಿಣದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದರು.

#WATCH | BJP leaders protest against Karnataka government over Cauvery water release to Tamil Nadu, in Bengaluru pic.twitter.com/Ujcclz4xCK
— ANI (@ANI) September 27, 2023

‘ಕಾವೇರಿ ನೀರು ನಿಯಂತ್ರಣ ಸಮಿತಿಗೆ (ಸಿಡಬ್ಲ್ಯುಆರ್‌ಸಿ) ಸರಿಯಾದ ವಿವರಗಳನ್ನು ನೀಡುವಲ್ಲಿ ಕರ್ನಾಟಕ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಸರ್ಕಾರದ ಕಡೆಗೆ ಬೆರಳು ತೋರಿಸುವುದು ಕೆಲಸ ಮಾಡುವುದಿಲ್ಲ. ಕೇಂದ್ರದಿಂದ ಆಗಬೇಕಿದ್ದ ಅಧಿಕೃತ ಕೆಲಸ ನಡೆದಿದೆ. ಈಗ ಅದು ಅಧಿಕಾರಿಗಳ ಕೈಯಲ್ಲಿದೆ ಮತ್ತು ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ’ ಎಂದು ಅವರು ಹೇಳಿದರು.

ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಯಡಿಯೂರಪ್ಪ ಮಾತನಾಡಿ, ‘ಈಗಿನ ಕಾಂಗ್ರೆಸ್ ಸರ್ಕಾರ ಕಾವೇರಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ರೈತರು ಅಕ್ಷರಶಃ ಬೀದಿ ಪಾಲಾಗಿದ್ದಾರೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಹರಿಯುತ್ತಲೇ ಇದೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ವಿಷಯದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಏಕೆಂದರೆ, ಇದು ನಿಮ್ಮ (ಈಗಿನ ಕಾಂಗ್ರೆಸ್ ಸರ್ಕಾರದ) ವೈಫಲ್ಯ’ ಎಂದರು.

ಕಾವೇರಿ ವಿಚಾರದಲ್ಲಿ ಸರ್ಕಾರ ಸಮರ್ಥವಾಗಿದೆ

ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಅವರು, ರಾಜ್ಯ ಸರ್ಕಾರವು ಸಮಸ್ಯೆಯನ್ನು ನಿಭಾಯಿಸಲು ಸಮರ್ಥವಾಗಿದೆ. ಸರ್ಕಾರವಾಗಿ ನಮಗೆ ಕೆಲವು ಜವಾಬ್ದಾರಿಗಳಿವೆ. ಕಾವೇರಿ ವಿಚಾರದಲ್ಲಿ ಅವರು ರಾಜಕೀಯ ಮಾಡಲಿ, ಸರ್ಕಾರ ನಮ್ಮ ರೈತರನ್ನು ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ: CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಮೌಢ್ಯಕ್ಕೆ ಸಡ್ಡು ಹೊಡೆದು ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಇದೇ ವೇಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಕಾವೇರಿ ನೀರು ನಿಯಂತ್ರಣ ಸಮಿತಿಯು (ಸಿಡಬ್ಲ್ಯುಆರ್‌ಸಿ) ಅಕ್ಟೋಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು ಬಿಡಲು ಆದೇಶಿಸಿದೆ. ನಾನು ಈಗಾಗಲೇ ನಮ್ಮ ವಕೀಲರೊಂದಿಗೆ ಮಾತನಾಡಿದ್ದೇನೆ. ಅವರು ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಮಗೆ ಸೂಚಿಸಿದ್ದಾರೆ. ನಾವು ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ತಮಿಳುನಾಡಿಗೆ ನೀರು ಬಿಡಲು ನಮಗೆ ನೀರಿಲ್ಲ’ ಎಂದು ಹೇಳಿದರು.

LEAVE A REPLY

Please enter your comment!
Please enter your name here