Home Uncategorized ಕಾವೇರಿ ವಿವಾದ: ವಿರೋಧದ ನಡುವೆ ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ, ರಾಜ್ಯ ಸರ್ಕಾರದ ವಿರುದ್ಧ ರೈತರ...

ಕಾವೇರಿ ವಿವಾದ: ವಿರೋಧದ ನಡುವೆ ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ, ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ

10
0

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮತ್ತೆ ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುತ್ತಿದೆ ಎಂದು ತಿಳಿದುಬಂದಿದೆ. ಮೈಸೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮತ್ತೆ ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಮುಂದಿನ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಪ್ರಾಧಿಕಾರ ಆದೇಶಿಸಿದ್ದು, ಇಂದು ಕೆಆರ್‌ಎಸ್‌ನಿಂದ 2,171 ಕ್ಯೂಸೆಕ್, ಕಬಿನಿಯಿಂದ 1,663 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ ಎಂದು ತಿಳಿದುಬಂದಿದೆ.

ಅಲ್ಲಿಗೆ ಒಟ್ಟು ಎರಡು ಡ್ಯಾಂಗಳಿಂದ 3,834 ಕ್ಯೂಸೆಕ್ ನೀರು ಹರಿಬಿಟ್ಟಿದ್ದು, ಉಳಿಕೆ 1,166 ಕ್ಯೂಸೆಕ್ ನೀರು ನಿನ್ನೆ ಡ್ಯಾಂ ಕೆಳ ಪ್ರದೇಶದಲ್ಲಿ ಬಿದ್ದ ಮಳೆಯ ನೀರಿನಿಂದ ತಮಿಳುನಾಡು ಸೇರುತ್ತಿದೆ. ಅಲ್ಲಿಗೆ ಇಂದು ಸಿಡಬ್ಲ್ಯೂಎಂಎ ಆದೇಶದಂತೆ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿಸಲಾಗಿದೆ.

ಮಳೆ ಇಲ್ಲದೆ ಕೆಆರ್​ಎಸ್​ ಡ್ಯಾಂನಲ್ಲಿ ನೀರಿನ ಕೊರತೆ ಇದ್ದು, ಇದೇ ರೀತಿ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗಲಿದೆ ಎಂದು ರೈತ ಸಂಘಟನೆಗಳು, ವಿರೋಧ ಪಕ್ಷದ ನಾಯಕರು, ಸೇರಿ ರಾಜ್ಯದ ಜನತೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಸೂಚನೆ ನೀಡಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡು ಸರ್ಕಾರಕ್ಕೆ ಸೆಪ್ಟೆಂಬರ್​ 13ರಿಂದ ಅನ್ವಯವಾಗುವಂತೆ 15 ದಿನಗಳ ಕಾಲ ಪ್ರತಿದಿನ ಐದು ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಅದರಂತೆ ರಾಜ್ಯದ ಜನರ ವಿರೋಧದ ಮಧ್ಯೆಯೂ ಅಧಿಕಾರಿಗಳು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ.

LEAVE A REPLY

Please enter your comment!
Please enter your name here