Home Uncategorized ಕಾವೇರಿ ವಿವಾದ: ಸಿದ್ದರಾಮಯ್ಯ ನಿಂದಿಸಲು ಹೋಗಿ ನೆಟ್ಟಿಗರಿಗೆ ಆಹಾರವಾದ ಚಕ್ರವರ್ತಿ ಸೂಲಿಬೆಲೆ!

ಕಾವೇರಿ ವಿವಾದ: ಸಿದ್ದರಾಮಯ್ಯ ನಿಂದಿಸಲು ಹೋಗಿ ನೆಟ್ಟಿಗರಿಗೆ ಆಹಾರವಾದ ಚಕ್ರವರ್ತಿ ಸೂಲಿಬೆಲೆ!

29
0

ಕಾವೇರಿ ಹೋರಾಟದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ನಿಂದಿಸಿ ಟ್ವಿಟ್ಟರ್​ ಖಾತೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಹಾಕಿದ್ದ ಪೋಸ್ಟ್ ಈಗ ಅವರಿಗೆಯೇ ತಿರುಗು ಬಾಣವಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ರಾಜಕಾರಣ, ದ್ವೇಷ ಮರೆತು ಎಲ್ಲರೂ ಒಂದಾಗಿ ಕಾವೇರಿ ನೀರನ್ನು ಉಳಿಸಿಕೊಳ್ಳಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಆದರೆ ಕಾವೇರಿ ಹೋರಾಟದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ನಿಂದಿಸಿ ಟ್ವಿಟ್ಟರ್​ ಖಾತೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಹಾಕಿದ್ದ ಪೋಸ್ಟ್ ಈಗ ಅವರಿಗೆಯೇ ತಿರುಗು ಬಾಣವಾಗಿದೆ.

ಸೂಲಿಬೆಲೆ ಅವರನ್ನು ಬೆಂಬಲಿಸುತ್ತಿದ್ದ ಅವರ ಅಭಿಮಾನಿಗಳೇ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ. ‘ಸಿದ್ರಾಮ’ ಹೆಸರನ್ನು ಹಿಂಬದಿಯಿಂದ ಓದಿದರೆ ಗೊತ್ತಾಗುತ್ತೆ ಸಿದ್ದರಾಮಯ್ಯ ಯಾಕೆ ತಮಿಳುನಾಡಿಗೆ ನೀರು ಬಿಟ್ಟರು ಎಂದು ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: CWRC ನಿರ್ದೇಶನ ಕರ್ನಾಟಕ ಪಾಲಿಗೆ ದೊಡ್ಡ ಹಿನ್ನಡೆ: ಬಿಜೆಪಿ, ಜೆಡಿಎಸ್ ಆಕ್ರೋಶ

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದು ಹಿಗ್ಗಾಮಗ್ಗಾ ಜಾಡಿಸಿದ್ದಾರೆ. ಸೂಲಿಬೆಲೆ ಟ್ವೀಟ್​ಗೆ ಹಲವರು ಆಕ್ರೋಶಗೊಂಡಿದ್ದಾರೆ.
Sidrama is read Madrasi in reverseCreative at its best.. pic.twitter.com/xp38bcQOZx— Chakravarty Sulibele (@astitvam) September 25, 2023

ನೀವಾದ್ರೂ ಲ್ಯಾಪ್ ಟಾಪ್ ಕನೆಕ್ಟ್ ಮಾಡಿ ಮೋದಿಗೆ ಹೇಳಿ ಕರ್ನಾಟಕ ನೀರನ್ನು ಉಳಿಸಿ ಎಂದು. ಈ ತರ ಚೀಪ್ ಪೋಸ್ಟ್ ಮಾಡಬೇಡಿ, ನಿಮ್ಮ ಘನತೆಯನ್ನು ಕಾಪಾಡಿಕೊಳ್ಳಿ ಎಂದು ನೆಟ್ಟಿಗರು ಸಲಹೆ ಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here