ಕಾಸರಗೋಡು, ಫೆ.13: ಕುಬಣೂರಿನಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸೋಮವಾರ ರಾತ್ರಿ ಅಗ್ನಿ ಅನಾಹುತ ಉಂಟಾಗಿದ್ದು, ಪರಿಸರವಿಡೀ ಹೊಗೆಯಿಂದ ಆವೃತ್ತ ವಾಗಿತ್ತು.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.
ಉಪ್ಪಳ, ಕಾಸರಗೋಡು ಹಾಗೂ ತ್ರಿಕ್ಕರಿಪುರದಿಂದ ಆಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದರು. ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ. ಜಿಲ್ಲಾಧಿಕಾರಿ ಕೆ. ಇನ್ಬಾ ಶೇಖರ್ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯಿತು.
ಬೆಂಕಿ ಅನಾಹುತದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಜಿಲ್ಲಾಧಿಕಾರಿ ಆದೇಶ ನೀಡಿದರು.
ಈ ಬೆಂಕಿಯಿಂದ ಪರಿಸರದಲ್ಲಿ ದುರ್ವಾಸನೆಯುಕ್ತ ಹೊಗೆ ಆವರಿಸಿದ್ದು, ತುರ್ತು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ವೈದ್ಯಾಧಿಕಾರಿಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಈ ಬೆಂಕಿ ಅವಘಡದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಕೆ. ಇನ್ಬಾ ಶೇಖರ್ ವಿಪತ್ತು ನಿವಾರಣೆ ಪ್ರಾಧಿಕಾರದ ಸಭೆ ಕರೆದಿದ್ದಾರೆ.