Home ಕರ್ನಾಟಕ ಕಾಸರಗೋಡು: ನೀರಿನಲ್ಲಿ ಕೊಚ್ಚಿಕೊಂಡು ಹೋದ ಕಾರು

ಕಾಸರಗೋಡು: ನೀರಿನಲ್ಲಿ ಕೊಚ್ಚಿಕೊಂಡು ಹೋದ ಕಾರು

57
0

ಕಾಸರಗೋಡು: ಕಾರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕುತ್ತಿಕೋಲ್ ಸಮೀಪ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಕುತ್ತಿ ಕೋಲ್ ಪಳ್ಳಂಜಿ ಯಲ್ಲಿ ಹೊಳೆಯ ಸೇತುವೆ ಮೂಲಕ ತೆರಳು ತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿದೆ. ಕಾರಿನಲ್ಲಿದ್ದ ಅಂಬಲತ್ತರದ ತಸ್ರಿಫ್ ಮತ್ತು ಅಬ್ದುಲ್ ರಶೀದ್  ಎಂಬವರನ್ನು ಪರಿಸರ ವಾಸಿಗಳು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ಗುರುವಾರ ಬೆಳಿಗ್ಗೆ ಅರಣ್ಯ ಪ್ರದೇಶದ ಪಳ್ಳಂಜಿ- ಪಾಂಡಿ ರಸ್ತೆಯ ತಡೆಗೋಡೆ ಇಲ್ಲದ ಸೇತುವೆ ಮೂಲಕ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಇಬ್ಬರೂ ಉಪ್ಪಿನಂಗಡಿಗೆ ತೆರಳುತ್ತಿದ್ದರು. ಗೂಗಲ್ ಮ್ಯಾಪ್ ಮೂಲಕ ಇವರು ಕಾರನಲ್ಲಿ ಸಂಚರಿಸುತ್ತಿ ದ್ದರು. ಹೊಳೆಯಲ್ಲಿ ಸೇತುವೆ ಮೇಲಿಂದ ನೀರು ಹರಿದು ಹೋಗುತ್ತಿತ್ತು. ಸೇತುವೆಗೆ ತಡೆಗೋಡೆ ಇಲ್ಲದಿರುವುದನ್ನು ಅರಿಯದೆ ಇವರು ಮುಂದಕ್ಕೆ ಸಾಗುತ್ತಿದ್ದಾಗ ನೀಯಂತ್ರಣ ತಪ್ಪಿದ ಕಾರು ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು , ಅಲ್ಪ ದೂರಕ್ಕೆ ಸಾಗಿ ಬದಿಯ ಮರಕ್ಕೆ ಬಡಿದು ನಿಂತಿದೆ. ಇಬ್ಬರೂ ಕಾರಿನಿಂದ ಹೊರಬಂದು ಮರಕ್ಕೆ ಹಿಡಿದು ನಿಂತಿದ್ದರು. ಪರಿಸರವಾಸಿಗಳು ಗಮನಿಸಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು , ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ  ಹಾಗೂ ಪರಿಸರವಾಸಿಗಳು ಇಬ್ಬರನ್ನು ರಕ್ಷಿಸಿದರು.

LEAVE A REPLY

Please enter your comment!
Please enter your name here