Home Uncategorized ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

29
0

ಮಂಗಳೂರು : 2023-24ನೇ ಸಾಲಿನ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆ, ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಭವನ, 2ನೇ ಮಹಡಿ ಮೆಸ್ಕಾಂ ಬಳಿ, ಬಿಜೈ ಮಂಗಳೂರು ಈ ಕಚೇರಿ ಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here