Home Uncategorized ಕುಮಾರಸ್ವಾಮಿ ಹಿಂದೆ ಯಾವ ಸ್ಟಾರ್ ನಟರನ್ನು ಕರೆತಂದಿರಲಿಲ್ವಾ? ಗೋಡೆಯ ಮೇಲೆ ಸೋಲು ಕಾಣುತ್ತಿದೆ ಅದಕ್ಕೆ ತಳಮಳ;...

ಕುಮಾರಸ್ವಾಮಿ ಹಿಂದೆ ಯಾವ ಸ್ಟಾರ್ ನಟರನ್ನು ಕರೆತಂದಿರಲಿಲ್ವಾ? ಗೋಡೆಯ ಮೇಲೆ ಸೋಲು ಕಾಣುತ್ತಿದೆ ಅದಕ್ಕೆ ತಳಮಳ; ಸಿಎಂ

30
0

ಎಚ್.ಡಿ ಕುಮಾರಸ್ವಾಮಿ ಹಿಂದೆ ಯಾವ ಸ್ಟಾರ್ ನಟರನ್ನು  ಪ್ರಚಾರಕ್ಕೆ ಕರೆ ತಂದಿರಲಿಲ್ವಾ? 1996 ರಾಮನಗರ ಉಪಚುನಾವಣೆಯಲ್ಲಿ ಅಂಬರೀಶ್ ಅವರನ್ನು ಕರೆದುಕೊಂಡು ಬಂದು ಪ್ರಚಾರ ಮಾಡಿದ್ದು ಮರೆತಿದ್ದಾರಾ? ಬೆಂಗಳೂರು: ಎಚ್.ಡಿ ಕುಮಾರಸ್ವಾಮಿ ಹಿಂದೆ ಯಾವ ಸ್ಟಾರ್ ನಟರನ್ನು  ಪ್ರಚಾರಕ್ಕೆ ಕರೆ ತಂದಿರಲಿಲ್ವಾ? 1996 ರಾಮನಗರ ಉಪಚುನಾವಣೆಯಲ್ಲಿ ಅಂಬರೀಶ್ ಅವರನ್ನು ಕರೆದುಕೊಂಡು ಬಂದು ಪ್ರಚಾರ ಮಾಡಿದ್ದು ಮರೆತಿದ್ದಾರಾ? ನಾವೇ ಅಂಬರೀಶ್ ಕರೆದುಕೊಂಡು ಬಂದು ಪ್ರಚಾರ ಮಾಡಿದ್ದೇವೆ  ಎಂದು ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ನಮ್ಮ ಜೊತೆಗೆ ಓರ್ವ ಸೂಪರ್ ಸ್ಟಾರ್ ಬಂದಿದ್ದಾರೆಂಬ, ಆತಂಕ, ಕಳವಳ ವಿರೋಧಿಗಳಿಗೆ ಕಾಡುತ್ತಿದೆ. ಹೀಗಾಗಿ ಅವರ ಸೋಲು ಗೋಡೆಯ ಮೇಲೆ ಕಾಣುತ್ತಿದೆ ಎಂದು ಹೇಳಿದರು.

ಹಿಂದೆ ಕುಮಾರಸ್ವಾಮಿ ಮತ್ತು ನಾನು 1996 ರಲ್ಲಿ ರಾಮನಗರ ಉಪಚುನಾವಣೆಯಲ್ಲಿ ಅಂಬರೀಶ್ ಅವರನ್ನು ಕರೆತಂದು ನಿಲ್ಲಿಸಿ, ಪ್ರಚಾರ ಮಾಡಿದ್ದೇವೆ. ಅದು ಕುಮಾರಸ್ವಾಮಿ ಅವರಿಗೆ ನೆನಪು ಇರಬಹುದು ಅಂತಾ ಅಂದುಕೊಳ್ಳುತ್ತೇನೆ. ಇದೀಗ ಒಬ್ಬ ಸೂಪರ್ ಸ್ಟಾರ್ ನಮ್ಮ ಜೊತೆಗೆ ಇದ್ದಾರೆಂಬ ತಳಮಳ ಕಾಡುತ್ತಿದೆ. ಹೀಗಾಗಿ ಸೋಲು ಗೋಡೆಯ ಮೇಲೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗತ್ತಾರೆಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕಲಘಟಗಿ ಕ್ಷೇತ್ರದಿಂದ ನಾಗರಾಜ್ ಛಬ್ಬಿ ಅವರು ನಮಗೆ ಏನೂ ಸಂಪರ್ಕ ಮಾಡಿಲ್ಲ. ಅದರ ಬಗ್ಗೆ ನಂಗೆ ಗೊತ್ತಿಲ್ಲ ಎಂದ ಅವರು, ಟಿಕೆಟ್ ಆಕಾಂಕ್ಷಿಗಳ ನಡುವೆ ಆಣೆಪ್ರಮಾಣದ ಕುರಿತು ಮಾತನಾಡಿ, ಇದು ಹೊಸದೆನ್ನಲ್ಲ, ಚುನಾವಣೆ ಬಂದಾಗ ಆ ಕ್ಷೇತ್ರದ ಹಿರಿಯರು ಬೇರೆ ಬೇರೆ ಕ್ರಮ ಮಾಡತ್ತಾ ಇರುತ್ತಾರೆ. ಅದರ ಬಗ್ಗೆ ವಿಶ್ಲೇಷಣೆ ಮಾಡುವುದಕ್ಕೆ ಬರುವುದಿಲ್ಲ ಎಂದರು.

LEAVE A REPLY

Please enter your comment!
Please enter your name here