ಬಿಡಿಎ ವತಿಯಿಂದ ಅಭಿವೃದ್ಧಿ ಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೂಲ ಸೌಕರ್ಯಗಳ ಕೊರತೆಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು: ಬಿಡಿಎ ವತಿಯಿಂದ ಅಭಿವೃದ್ಧಿ ಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೂಲ ಸೌಕರ್ಯಗಳ ಕೊರತೆಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.
ಪರಿಶೀಲನೆ ವೇಳೆ ಶಿವಕುಮಾರ್ ಅವರು, ಲೇಔಟ್ ರಚನೆಗೆ ಅಗತ್ಯವಿರುವ ಶೇ 60ರಷ್ಟು ಭೂಮಿಯನ್ನು ಮಾತ್ರ ಇಲ್ಲಿಯವರೆಗೆ ಸ್ವಾಧೀನಪಡಿಸಿಕೊಳ್ಳಲಾಗಿದೆ. “ಭೂಸ್ವಾಧೀನ ಸಮಸ್ಯೆ ಮತ್ತು ಪರಿಹಾರದ ವಿಧಾನಗಳ ಬಗ್ಗೆ ಕಂದಾಯ ಇಲಾಖೆ ಮತ್ತು ಕಾನೂನು ತಜ್ಞರೊಂದಿಗೆ ಚರ್ಚಿಸುತ್ತೇನೆ” ಎಂದು ಹೇಳಿದರು.
ಬಡಾವಣೆಯ ಬಗ್ಗೆ ದೂರುಗಳು ಬರುತ್ತಿದ್ದು, ಮುಂದಿನ ಮಾರ್ಗದ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
‘ಬಡಾವಣೆಯಲ್ಲಿ ವಿದ್ಯುತ್ ಸರಬರಾಜು, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯಗಳಿಲ್ಲದಿರುವುದು ಎದ್ದು ಕಾಣುತ್ತಿದೆ. ಮೂಲಸೌಕರ್ಯಗಳ ಕೊರತೆಯಿಂದಾಗಿಯೇ ಮನೆ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ ಎಂದು ನಿವೇಶನ ಹಂಚಿಕೆದಾರರು ಹೇಳಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.