ಬೆಂಗಳೂರು:
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕಸ್ಟಮ್ಸ್ ಅಧಿಕಾರಿಗಳು, 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ವಿಮಾನ ನಿಲ್ದಾಣದ ಕಸ್ಟಮ್ಸ್ ಇಂಟಲಿಜೆನ್ಸ್ ಅಧಿಕಾರಿಗಳು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಚಿನ್ನ ಅಕ್ರಮ ಸಾಗಣೆ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಟಲಿಜೆನ್ಸ್ ಅಧಿಕಾರಿಗಳು ಸಹ ಮಾಹಿತಿ ಕಲೆ ಹಾಕುತ್ತಿದ್ದಾರೆ’ ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ಹೇಳಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯು ಗುಪ್ತಚರ ಅಧಿಕಾರಿಗಳು ಎರಡು ಸಂದರ್ಭಗಳಲ್ಲಿ ಚಿನ್ನವನ್ನು ಪತ್ತೆ ಮಾಡಿದ್ದಾರೆ: 1659 ಗ್ರಾಂ (82.95 ಲಕ್ಷ ರೂ) ಪೇಸ್ಟ್ ರೂಪದಲ್ಲಿ ಮತ್ತು – 232 ಗ್ರಾಂ (11.85 ಲಕ್ಷ ರೂ) ಪ್ರಾಥಮಿಕ ರೂಪದಲ್ಲಿ. ಪೇಸ್ಟ್ ರೂಪದಲ್ಲಿ ಕಳ್ಳಸಾಗಣೆ ಮಾಡಲು ಪ್ರಯಾಣಿಕನನ್ನು ಬಂಧಿಸಲಾಗಿತ್ತು. https://t.co/umvlcKDwe2
— Bengaluru Customs (@blrcustoms) November 5, 2020
ಎರಡು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.