ಬೆಂಗಳೂರು: 2023-24 ಸಾಲಿಗೆ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಏPSಅ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೆ ಸಾಲಿನ ಗೆಜೆಟೆಡ್ ಪ್ರೊಬೇಷನರಿ(ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು 15 ದಿನಗಳ ವಿಶೇಷ ಅವಕಾಶವನ್ನು ನೀಡಲು ಸರಕಾರ ನಿರ್ಧರಿಸಿದೆ.
ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ನಿಯಮಗಳು, 1997 ರನ್ವಯ 2023-24ನೆ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು ಕೆಎಎಸ್ ಹುದ್ದೆಗಳ ರಿಕ್ತ ಸ್ಥಾನಗಳಿಗೆ ಫೆ.26ರಂದು ಹೊರಡಿಸಿರುವ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಳಿಸಿದೆ.
ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ 2017-18ನೆ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿಬರ್ಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಿ ಸರಕಾರವು ಆದೇಶಿಸಿದೆ.