Home Uncategorized ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ವರದಿ ಒಪ್ಪಿಕೊಂಡ ಸರ್ಕಾರದ ಕ್ರಮ ಸರಿಯಿದೆ; ಮಾಜಿ...

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ವರದಿ ಒಪ್ಪಿಕೊಂಡ ಸರ್ಕಾರದ ಕ್ರಮ ಸರಿಯಿದೆ; ಮಾಜಿ ಸಿಎಂ ಬೊಮ್ಮಾಯಿ

42
0

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಹಿಂದಿನ ಸರ್ಕಾರ ನೇಮಿಸಿದ್ದ ಮ್ಯಾಜಿಸ್ಟ್ರೇಟ್ ಪೊಲೀಸರು ತೆಗೆದುಕೊಂಡ ಕ್ರಮ ಸರಿಯಾಗಿದೆ ಎಂದು ನೀಡಿದ್ದ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಒಪ್ಪಿಕೊಂಡಿದ್ದು ಸರಿಯಾದ ಕ್ರಮವಾಗಿದ್ದು, ತಮ್ಮ ಸರ್ಕಾರದ ತೀರ್ಮಾನ ಸರಿಯಾಗಿತ್ತು… ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಹಿಂದಿನ ಸರ್ಕಾರ ನೇಮಿಸಿದ್ದ ಮ್ಯಾಜಿಸ್ಟ್ರೇಟ್ ಪೊಲೀಸರು ತೆಗೆದುಕೊಂಡ ಕ್ರಮ ಸರಿಯಾಗಿದೆ ಎಂದು ನೀಡಿದ್ದ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಒಪ್ಪಿಕೊಂಡಿದ್ದು ಸರಿಯಾದ ಕ್ರಮವಾಗಿದ್ದು, ತಮ್ಮ ಸರ್ಕಾರದ ತೀರ್ಮಾನ ಸರಿಯಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಡಿಜೆ ಹಳ್ಳಿ ಹಳ್ಳಿ ಗಲಭೆ ವಿಚಾರದಲ್ಲಿ ನೇಮಿಸಿದ್ದ ಅಧಿಕಾರಿಯ ರಿಪೋರ್ಟ್ ಬಂದಿದೆ. ರಾಜ್ಯ ಸರ್ಕಾರ ಯಥಾವತ್ತಾಗಿ ವರದಿ ಒಪ್ಪಿಕೊಂಡಿದೆ. ಇದು ಸರಿಯಾದ ಕ್ರಮ. ಹಿಂಸೆ, ಪೊಲೀಸರ ಮೇಲೆ ದಾಳಿ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಂಡ ಕ್ರಮವಾಗಿದೆ” ಎಂದಿದ್ದಾರೆ.

ಒಂದು ಸಮುದಾಯವನ್ನು ಟಾರ್ಗೆಟ್ ಮಾಡಿದ್ದರು ಎಂದು ಕಾಂಗ್ರೆಸ್‌ನವರು ಮಾಡಿರುವ ಆರೋಪದ‌ ಕುರಿತು ಕೇಳಿದ ಪ್ರಶ್ನೆಗೆ “ಎಲ್ಲ ವಿಚಾರಗಳು ಮಾಧ್ಯಮದಲ್ಲಿ ಲೈವ್ ಆಗಿ ನೋಡಿದ್ದಾರೆ. ಯಾವುದೇ ಸಮುದಾಯ ಟಾರ್ಗೆಟ್ ಮಾಡುವ ಕೆಲಸ ಮಾಡಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ರೆಕಾರ್ಡ್ಸ್ ಸುಟ್ಟು ಹಾಕುವ ಕೆಲಸ ಮಾಡಿದ್ದರು. ಅವರದ್ದೇ ಪಕ್ಷದ ಶಾಸಕನ ರಕ್ಷಣೆಗೆ ಬರಲಿಲ್ಲ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here