ಬೆಂಗಳೂರು: ರಾಜ್ಯ ಸರಕಾರವು ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಕಾರ್ಯದರ್ಶಿ ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ.ರಾಕೇಶ್ ಕುಮಾರ್ ಕೆ. ಅವರನ್ನು ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಹಾಗೂ ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿದ್ದ ಲತಾ ಕುಮಾರಿ ಅವರನ್ನು ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯಕಾರಿ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.