ಬೆಂಗಳೂರು : ಕೇಂದ್ರ ಸರಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ಸ್ವೀಕರಿಸಿ ಪ್ರಥಮವಾಗಿ ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿಗೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾಡಪ್ರಭು ಕೆಂಪೇಗೌಡ ಅವರ ಬೆಳ್ಳಿ ಪ್ರತಿಮೆ ನೀಡುವ ಮೂಲಕ ಗೌರವಿಸಲಾಯಿತು.
ಕುಮಾರಸ್ವಾಮಿ ಅವರಿಗಾಗಿ ಪಕ್ಷದ ಕೇಂದ್ರ ಕಚೇರಿಯಾದ ಜೆ.ಪಿ. ಭವನದ ಆವರಣದಲ್ಲಿ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಜೆಡಿಎಸ್ ಕಾರ್ಯಕರ್ತರು, ನಾಯಕರು ನೂತನ ಸಚಿವರನ್ನು ಅಭಿನಂದಿಸಿದರು.