Home Uncategorized ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ- ಜಗದೀಶ್ ಶೆಟ್ಟರ್ ವಾಗ್ದಾಳಿ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ- ಜಗದೀಶ್ ಶೆಟ್ಟರ್ ವಾಗ್ದಾಳಿ

27
0

ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಎಂಎಲ್‌ಸಿ ಜಗದೀಶ್‌ ಶೆಟ್ಟರ್‌, ಇದು ಅಕ್ಷಮ್ಯ ಅಪರಾಧ’ ಎಂದು  ಆರೋಪಿಸಿದರು. ಹುಬ್ಬಳ್ಳಿ: ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಎಂಎಲ್‌ಸಿ ಜಗದೀಶ್‌ ಶೆಟ್ಟರ್‌, ಇದು ಅಕ್ಷಮ್ಯ ಅಪರಾಧ’ ಎಂದು  ಆರೋಪಿಸಿದರು.

ಬಿಪಿಎಲ್ ಕುಟುಂಬದ ಎಲ್ಲ ಸದಸ್ಯರಿಗೆ 10 ಕಿಲೋಗ್ರಾಂ ಅಕ್ಕಿ ನೀಡುವ ಉದ್ದೇಶದಿಂದ ಅನ್ನ ಭಾಗ್ಯ ಯೋಜನೆ ಜಾರಿಗೊಳಿಸಲು ರಾಜ್ಯಕ್ಕೆ ಅಕ್ಕಿ ಮಾರಾಟ ಅಥವಾ ಹೆಚ್ಚುವರಿ ಪೂರೈಕೆ ನಿರಾಕರಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್,  ‘ಕರ್ನಾಟಕಕ್ಕೆ ಅಕ್ಕಿ ಮಾರಾಟ ನಿರಾಕರಿಸಿರುವುದು ಕೇಂದ್ರ ಸರ್ಕಾರದ ಉತ್ತಮ ನಡತೆ ಅಲ್ಲ ಎಂದರು. 

ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತರ ಕರ್ನಾಟಕದಲ್ಲಿ 6ರಿಂದ 7 ಸ್ಥಾನಗಳನ್ನು ಗೆಲ್ಲಲಿದೆ: ಜಗದೀಶ್ ಶೆಟ್ಟರ್
 

ಮೊದಲಿಗೆ ಅಕ್ಕಿ ನೀಡುವುದಾಗಿ ಭರವಸೆ ನೀಡಿ ಈಗ ರಾಜಕೀಯ ಕಾರಣಕ್ಕೆ ಅದನ್ನು ನಿರಾಕರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ರಾಜ್ಯಕ್ಕೆ ನೀಡಬೇಕು ಎಂದು ಒತ್ತಾಯಿಸಿದರು.  ಈ ನಡುವೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತು ಆಹಾರ ಇಲಾಖೆಯ ಉನ್ನತ ಅಧಿಕಾರಿಗಳು. ಮಧ್ಯಾಹ್ನ ಸಭೆ ನಡೆಯಲಿದ್ದು, ಪರ್ಯಾಯ ವ್ಯವಸ್ಥೆ ಕುರಿತು ಚರ್ಚೆ ನಡೆಯಲಿದೆ.

ಉಚಿತ ಪ್ರಯಾಣ ಯೋಜನೆ ಜಾರಿಯಾದ ನಂತರ ಪಕ್ಷ ಮತ್ತು ಸರ್ಕಾರದ ವರ್ಚಸ್ಸು ಸ್ಥಿರವಾಗಿ ಬೆಳೆಯುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಬಿಪಿಎಲ್ ಕಾರ್ಡುದಾರರ ಎಲ್ಲ ಸದಸ್ಯರಿಗೆ 10 ಕಿಲೋಗ್ರಾಂ ಉಚಿತ ಅಕ್ಕಿ ಯೋಜನೆಗೆ ಚಾಲನೆ ನೀಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಜನಪರ ಒಲವು ಹೆಚ್ಚಾಗಲಿದ್ದು, ಲೋಕಸಭೆ ಚುನಾವಣೆ ವೇಳೆಗೆ  ಬಿಜೆಪಿಗೆ ಈ ಬೆಳವಣಿಗೆ ಪ್ರತಿಕೂಲವಾಗಲಿದೆ ಎನ್ನಲಾಗುತ್ತಿದೆ. 

LEAVE A REPLY

Please enter your comment!
Please enter your name here