ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಎದುರಾಗಿರುವ ನಡುವಲ್ಲೇ ಡಿಸಿಎಂ ಸ್ಥಾನವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೀಡಬೇಕೆಂದು ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಕೊಪ್ಪಳ: ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಎದುರಾಗಿರುವ ನಡುವಲ್ಲೇ ಡಿಸಿಎಂ ಸ್ಥಾನವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೀಡಬೇಕೆಂದು ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
ಕೊಪ್ಪಳದ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಮುಸ್ಲಿಮರು ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಸ್ಥಾನ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಜಮೀರ್ ಅಹ್ಮದ್ ಅವರಿಗೆ ಡಿಸಿಎಂ ಸ್ಥಾನ ಹಾಗೂ ಶಿವರಾಜ್ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂಲಕ ಮುಸ್ಲಿಂ ಸಮಾಜಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸುತ್ತಾರೆ.