Home ಕರ್ನಾಟಕ ಕೋಲಾರ ಕಾಂಗ್ರೆಸ್‌ ಶಾಸಕರ ರಾಜಿನಾಮೆ ಎಚ್ಚರಿಕೆ ವಿಚಾರ : ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದೇನು?

ಕೋಲಾರ ಕಾಂಗ್ರೆಸ್‌ ಶಾಸಕರ ರಾಜಿನಾಮೆ ಎಚ್ಚರಿಕೆ ವಿಚಾರ : ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದೇನು?

16
0

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ  ಟಿಕೆಟ್‌ ಯಾರಿಗೆ ಕೊಡಬೇಕೆಂದು ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರು ಸೇರಿ ತೀರ್ಮಾನ ಮಾಡುತ್ತಾರೆ. ಈ ಸಂಬಂಧ ರಾಜೀನಾಮೆ ನೀಡಲು ಹೋದವರ ಕುರಿತು ನಾನು ಮಾತಾಡಲ್ಲ’ ಎಂದು ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಎಲ್ಲರೂ ಹೇಳಿದ್ದರು. ರಮೇಶ್ ಕುಮಾರ್ ಮತ್ತು ಅವರ ಬೆಂಬಲಿಗರು ಕೂಡಾ ಅದೇ ಮಾತು‌ ಹೇಳಿದ್ದರು. ಆ ಸಭೆಯಲ್ಲಿ ಎಲ್ಲರೂ ಇದ್ದರು. ಈ ಹಿಂದೆ ಅಹಿತಕರ ಘಟನೆ ನಡೆದಿದ್ದರೆ ಮರೆಯೋಣ ಎಂದೂ ಆ ಸಭೆಯಲ್ಲಿ ನಾನು ಹೇಳಿದ್ದೆ’ ಎಂದರು.

ʼಕೋಲಾರ ಲೋಕಸಭಾ ಕ್ಷೇತ್ರದಿಂದ ಜಾಫರ್ ಷರೀಫ್, ಶಂಕರಾನಂದ ಬಳಿಕ ಏಳು ಬಾರಿ ನಿರಂತರವಾಗಿ ನಾನು ಗೆದ್ದಿದ್ದೇನೆ. ಅವಕಾಶ ಕೊಟ್ಟರೆ ಗೆಲ್ಲಿಸಿಕೊಂಡು ಬರುತ್ತೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷ ಭದ್ರವಾಗಿದೆʼ ಎಂದು ಹೇಳಿದರು.

ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಅನ್ನು ಸಚಿವ ಕೆ.ಎಚ್‌. ಮುನಿಯಪ್ಪ ಕುಟುಂಬಕ್ಕೆ ನೀಡಬಾರದು ಎಂದು ಪಟ್ಟು ಹಿಡಿದಿರುವ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯರಾದ ನಝೀರ್‌ ಅಹ್ಮದ್‌ ಹಾಗೂ ಅನಿಲ್‌ ಕುಮಾರ್‌ ಅವರು ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಬುಧವಾರ ಬೆಳಿಗ್ಗೆ ಸಭಾಪತಿ ಬಸವರಾಜ ಹೊರಟ್ಟಿ ಕಚೇರಿಗೆ ಬಂದರೂ ರಾಜೀನಾಮೆ ನೀಡದೆ ತೆರಳಿದರು.

LEAVE A REPLY

Please enter your comment!
Please enter your name here