ಕೋಲಾರ: ಇಲ್ಲಿನ ಡಿಸಿಸಿ ಬ್ಯಾಂಕ್ ಪಕ್ಕದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರ ಸಭೆಯಲ್ಲಿ ಕಾಂಗ್ರೆಸ್ ನ ಎರಡು ಬಣಗಳ ನಡುವೆ ಗಲಾಟೆ ನಡೆದಿರುವ ಬಗ್ಗೆ ವರದಿಯಾಗಿದೆ.
ಬ್ಯಾನರ್ ನಲ್ಲಿ ಶಾಸಕ ಕೊತ್ತೂರು ಮಂಜುನಾಥ್, ರಮೇಶ್ ಕುಮಾರ್ , ನಸೀರ್ ಅಹ್ಮದ್ ಫೋಟೊ ಇಲ್ಲದ ಹಿನ್ನಲೆಯಲ್ಲಿ ಗದ್ದಲವುಂಟಾಗಿದೆ ಎನ್ನಲಾಗಿದ್ದು, ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ ಮತ್ತು ಸಚಿವ ಕೆ.ಎಚ್ ಮುನಿಯಪ್ಪ ಬಣದವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಮುನಿಯಪ್ಪ ಅವರ ಬೆಂಬಲಿಗ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ ಮೇಲೆ ಏಕಾಏಕಿ ದಾಳಿ ನಡೆದಿದ್ದು, ಶ್ರೀನಿವಾಸ ಅವರು ಸಭೆಯಿಂದ ಹೊರ ನಡೆದಿದ್ದಾರೆ.