Home Uncategorized ಕೋವಿಡ್-19 ನಿರ್ವಹಣೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ

ಕೋವಿಡ್-19 ನಿರ್ವಹಣೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ

28
0

ಬೆಂಗಳೂರು: ಕೋವಿಡ್-19 ಸೋಂಕಿನ ನಿಯಂತ್ರಣ ಹಾಗೂ ನಿರ್ವಹಣೆ ಕುರಿತು ಪರಾಮರ್ಶೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

ಸಮಿತಿಯ ಸದಸ್ಯರಾದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಇದ್ದಾರೆ. ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕು ಏರಿಕೆ ಹಿನ್ನೆಲೆಯಲ್ಲಿ ನಿನ್ನೆ(ಡಿ.21) ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತಜ್ಞರ ಸಭೆ ನಡೆಸಲಾಗಿತ್ತು.

ಆ ಸಭೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಮತ್ತು ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ರಚಿಸಲಾಗುವುದು ಎಂದು ಪ್ರಕಟಿಸಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಸಮಿತಿಗೆ ಅಗತ್ಯ ನೆರವು ನೀಡಬೇಕು ಎಂದು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here