Home Uncategorized ಖಾಸಗಿ ಬಸ್‍ಗೂ ‘ಶಕ್ತಿ’ ಯೋಜನೆ ವಿಸ್ತರಣೆ: ಮನವಿ ಪರಿಗಣಿಸಲು ಹೈಕೋರ್ಟ್ ಸೂಚನೆ

ಖಾಸಗಿ ಬಸ್‍ಗೂ ‘ಶಕ್ತಿ’ ಯೋಜನೆ ವಿಸ್ತರಣೆ: ಮನವಿ ಪರಿಗಣಿಸಲು ಹೈಕೋರ್ಟ್ ಸೂಚನೆ

32
0

ಬೆಂಗಳೂರು: ಸರಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ‘ಶಕ್ತಿ ಯೋಜನೆ’ಯನ್ನು ಖಾಸಗಿ ಬಸ್‍ಗಳಿಗೂ ವಿಸ್ತರಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಮುಂದಿನ 2 ತಿಂಗಳಲ್ಲಿ ಪರಿಗಣಿಸುವಂತೆ ಸರಕಾರಕ್ಕೆ ಸೂಚಿಸಿದೆ.

ಈ ಸಂಬಂಧ ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಶಕ್ತಿ ಯೋಜನೆಯನ್ನು ಖಾಸಗಿ ಬಸ್‍ಗಳಿಗೂ ವಿಸ್ತರಿಸಬೇಕು ಎಂದು ಕೋರಿದರು.

LEAVE A REPLY

Please enter your comment!
Please enter your name here