ಬೆಂಗಳೂರು : ಹಿರಿಯ ಮಹಿಳಾ ಸಾಹಿತಿ ನಾಡೋಜ ಕಮಲ ಹಂಪನಾ (89) ಅವರು ರಾಜಾಜಿನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಮಲಗಿದ್ದಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಾಹಿತ್ಯ ಅಕಾಡೆಮಿ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಕಮಲ ಅವರು ಸಾಹಿತಿ ಹಂ.ಪ. ನಾಗರಾಜಯ್ಯ ಅವರ ಪತ್ನಿ.
ಕಮಲಾ ಹಂಪನಾ ಅವರು ಕನ್ನಡದ ಲೇಖಕರಾಗಿ, ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ.
ಕಮಲ ಹಂಪನಾ ಅವರು ಪತಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಬಂಧು ಮಿತ್ರರ ಸಹಿತ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಅವರ ಅಗಲಿಕೆಗೆ ಹಿರಿಯ ಸಾಹಿತಿಗಳೂ, ಗಣ್ಯರೂ ಸೇರಿದಂತೆ ಅವರ ಅಪಾರ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂಜೆಯ ತನಕ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.