Home Uncategorized ಗಡಿ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ: ಸಿಎಂ ಬೊಮ್ಮಾಯಿ ಕರೆ

ಗಡಿ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ: ಸಿಎಂ ಬೊಮ್ಮಾಯಿ ಕರೆ

33
0

ಬೆಂಗಳೂರು: ಗಡಿ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಯನ್ನು ಗಮನಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ಶಿಂಧೆ ಹೇಳಿಕೆ ಬಗ್ಗೆ ಚರ್ಚಿಸಲು ಮುಂದಿನ ವಾರ ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸುತ್ತೇವೆ. ಸುಪ್ರೀಂಕೋರ್ಟ್​ನಲ್ಲಿ ಮಹಾರಾಷ್ಟ್ರ ಸರ್ಕಾರವೇ ದಾವೆ ಹೂಡಿದೆ. ವಾದ ಮಂಡನೆಗೆ ಸಮರ್ಥವಾಗಿ ತಯಾರಿ‌ ಮಾಡಿಕೊಂಡಿದ್ದೇವೆ. ಈ ಮಧ್ಯೆ ಮಾತುಕತೆ ನಡೆಸುವ ಕುರಿತು ಹೇಳಿಕೆ ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ನಲ್ಲಿ ವಾದ ಮಾಡುವ ಬಗ್ಗೆ ತೀರ್ಮಾನಿಸಲಾಗಿತ್ತು. ಈ‌ ಹಿಂದೆ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ಹೇಳಿದರು.

ಸದ್ಯ ನಮಗೆ ‘ಸುಪ್ರೀಂ’ ಮುಂದೆ ವಾದ ಮಂಡಿಸುವ ಉದ್ದೇಶ ಇದೆ. ಆದರೆ ಮಾತುಕತೆ ಬಗ್ಗೆ ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಗಡಿ ವಿಚಾರವೇ ಮುಗಿದು ಹೋಗಿದೆ. ಜತ್ ತಾಲೂಕು ಕರ್ನಾಟಕಕ್ಕೆ ಸೇರುವ ಬಗ್ಗೆ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು ನಿರ್ಧರಿಸಿವೆ. ಇವೆಲ್ಲ ಸುಪ್ರೀಂಕೋರ್ಟ್ ಮುಂದೆ ವಾದ ಮಂಡನೆ ವೇಳೆ ಬರಲಿದೆ ಎಂದರು ಸಿಎಂ ಬೊಮ್ಮಾಯಿ.

ಈ ಬಗ್ಗೆ ಏನು ಉತ್ತರ ಕೊಡಬೇಕೋ ಅದನ್ನು ಸಿಎಂ ಕೊಟ್ಟಿದ್ದಾರೆ: ಸಿ.ಟಿ.ರವಿ 

ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಪದೇಪದೆ ಕ್ಯಾತೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿದ್ದು, ಈ ಬಗ್ಗೆ ಏನು ಉತ್ತರ ಕೊಡಬೇಕೋ ಅದನ್ನು ಸಿಎಂ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಮರಾಠಿಗರು ಸುರಕ್ಷಿತವಾಗಿದ್ದಾರೆ. ವಿವಾದದ ನಡುವೆಯೂ ಮಹಾರಾಷ್ಟ್ರದಲ್ಲಿ ನಮ್ಮ ಕನ್ನಡಿಗರು ಕೂಡ ಸೇಫ್ ಆಗಿದ್ದಾರೆ. ನಾವು ಪಿಒಕೆಗೆ ಮೊದಲ ಪ್ರಾಮುಖ್ಯತೆ ಕೊಡುತ್ತೇವೆ. ಅದನ್ನ ಹೇಗೆ ವಾಪಸ್ ತಗೋಬೇಕು ಅನ್ನೋದು ನಮ್ಮ ಆದ್ಯತೆ. ಪಿಒಕೆ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತವಾಗಿಲ್ಲ. ಹಾಗಾಗಿ ನಾವು ಹೆಚ್ಚು ಪಿಒಕೆಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

LEAVE A REPLY

Please enter your comment!
Please enter your name here