Home Uncategorized ಗಣಿ ಪರಿಸರ ಪುನಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಗಣಿ ಪರಿಸರ ಪುನಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ

13
0

ಗಣಿಗಾರಿಕೆ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಹಾಗೂ ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸೂಚನೆ ನೀಡಿದರು. ಬೆಂಗಳೂರು: ಗಣಿಗಾರಿಕೆ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಹಾಗೂ ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸೂಚನೆ ನೀಡಿದರು.

ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದ ಅವರು, ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆಯ (ಸಿಇಪಿಎಂಐಝಡ್‌) ಕ್ರಿಯಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸುಪ್ರೀಂಕೋರ್ಟ್‌ ಅನುಮೋದಿಸಿದೆ. ಇದಕ್ಕೆ ಪೂರಕವಾಗಿ ನಿಗಮದ ಬೈಲಾ ತಿದ್ದುಪಡಿ ಮಾಡಿ, ಆಡಳಿತ ಮಂಡಳಿಗೆ ಮುಖ್ಯಮಂತ್ರಿಯವರನ್ನು ಅಧ್ಯಕ್ಷರನ್ನಾಗಿ ಮಾಡುವಂತೆ ಸೂಚಿಸಿದರು.

 ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಈ 4 ಜಿಲ್ಲೆಗಳ 466 ಗ್ರಾಮಗಳನ್ನು ಗಣಿ ಬಾಧಿತ ಎಂದು ಘೋಷಿಸಲಾಗಿದ್ದು, ಈ ಗ್ರಾಮಗಳ ಅಭಿವೃದ್ಧಿಗೆ ಸುಪ್ರೀಂಕೋರ್ಟ್‌ 24,996.71 ಕೋ. ರೂ. ಅಂದಾಜು ವೆಚ್ಚದ ಕ್ರಿಯಾ ಯೋಜನೆಯನ್ನು ಅನುಮೋದಿಸಿದೆ. ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾ| ಸುದರ್ಶನ ರೆಡ್ಡಿ ಅವರನ್ನು ಮೇಲುಸ್ತುವಾರಿ ಪ್ರಾಧಿಕಾರವಾಗಿ ನೇಮಕ ಮಾಡಲಾಗಿದ್ದು, ಯೋಜನೆಗಳ ಅನುಮೋದನೆ ಮತ್ತು ಅನುಷ್ಠಾನದ ಮೇಲುಸ್ತುವಾರಿಯನ್ನು ನೀಡಲಾಗಿದೆ. ಈ ಪ್ರಾಧಿಕಾರವು ಈವರೆಗೆ 4 ಜಿಲ್ಲೆಗಳಲ್ಲಿ ಒಟ್ಟು 7634.96 ಕೋ. ರೂ. ಮೊತ್ತದ 317 ಪ್ರಸ್ತಾವನೆಗಳನ್ನು ಅನುಮೋದಿಸಿದೆ.

ಉಳಿದ ಪ್ರಸ್ತಾವನೆಗಳನ್ನು ತ್ವರಿತವಾಗಿ ಸಿದ್ಧಪಡಿಸಿ ಅನುಮೋದನೆ ಪಡೆಯಲು ಅನುವಾಗುವಂತೆ ಈ ನಾಲ್ಕು ಜಿಲ್ಲೆಗಳಲ್ಲಿ ಎಂಜಿನಿಯರಿಂಗ್‌ ಕೋಶವನ್ನು ಸ್ಥಾಪಿಸಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತ್ವರಿತವಾಗಿ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.

ಈ ಯೋಜನೆಯನ್ನು ಸದ್ಬಳಕೆ ಮಾಡುವ ಮೂಲಕ ಗಣಿಬಾಧಿತ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ವಿಫ‌ುಲ ಅವಕಾಶವಿದ್ದು, ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಲು ಆದ್ಯತೆ ನೀಡಬೇಕೆಂದು ಸೂಚಿಸಿದರು.

LEAVE A REPLY

Please enter your comment!
Please enter your name here