ಗದಗದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರೊಂದು 2 ಬೈಕ್ ಗಳಿಗೆ ಡಿಕ್ಕಿಯಾದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಗದಗ: ಗದಗದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರೊಂದು 2 ಬೈಕ್ ಗಳಿಗೆ ಡಿಕ್ಕಿಯಾದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಗದಗದ ಅಡವಿಸೋಮಾಪುರ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದ್ದು, ಶಿಂಗಟಾರಯನಕೇರಿ ತಾಂಡಾ ನಿವಾಸಿ ಶಿವಪ್ಪ ನಾಯ್ಕ್(50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾಣಿ(33) ಮತ್ತು ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್(31) ಎಂಬುವವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, 4 ಮಂದಿಗೆ ಗಾಯ, ಓರ್ವ ಸಾವು
ಬೈಕ್ನಲ್ಲಿ ತೆರಳುತ್ತಿದ್ದಾಗ ಕಾರು 2 ಬೈಕ್ ಗಳಿಗೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೈಕ್ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದ್ದು, ಚಾಲಕ ಪರಾರಿ ಆಗಿದ್ದಾನೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.