Home Uncategorized ಗರ್ಭಕಂಠದ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ

ಗರ್ಭಕಂಠದ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ

36
0

ಹೊಸದಿಲ್ಲಿ : ಗರ್ಭಕಂಠದ ಕ್ಯಾನ್ಸರ್ ತಡೆಗೆ 9ರಿಂದ 14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ.

ತಾಯಿ ಹಾಗೂ ಮಗುವಿನ ಆರೋಗ್ಯ ರಕ್ಷಣೆಗೆ ವಿವಿಧ ಯೋಜನೆಗಳನ್ನು ಒಂದು ಸಮಗ್ರ ಕಾರ್ಯಕ್ರಮದ ಅಡಿಯಲ್ಲಿ ತರಲಾಗುವುದು ಎಂದು ಅವರು ತಿಳಿಸಿದರು.

ಸಕ್ಷಮ ಅಂಗನವಾಡಿ ಹಾಗೂ ಪೋಷಣ್ 2.0 ಅಡಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು ಹಾಗೂ ಸುಧಾರಿತ ಪೌಷ್ಟಿಕಾಂಶ ವಿತರಣೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಲಸಿಕೆ ನೀಡಿಕೆಯನ್ನು ನಿರ್ವಹಿಸಲು ದೇಶದಲ್ಲಿ ಯು-ವಿನ್ ವೇದಿಕೆಯನ್ನು ಆರಂಭಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

LEAVE A REPLY

Please enter your comment!
Please enter your name here