Home ಕರ್ನಾಟಕ ಗುರುರಾಜ ಮಾರ್ಪಳ್ಳಿಗೆ ಯಕ್ಷ ವಿದ್ವಾಂಸ ಪ್ರಶಸ್ತಿ

ಗುರುರಾಜ ಮಾರ್ಪಳ್ಳಿಗೆ ಯಕ್ಷ ವಿದ್ವಾಂಸ ಪ್ರಶಸ್ತಿ

27
0

ಉಡುಪಿ, ಮೇ8: ಉಡುಪಿಯ ಯಕ್ಷಗಾನ ಕಲಾರಂಗ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಕಲಾವಿದ, ರಂಗಕರ್ಮಿ, ಸಂಗೀತಗಾರ, ವಿದ್ವಾಂಸ ಗುರುರಾಜ ಮಾರ್ಪಳ್ಳಿ ಆಯ್ಕೆಯಾಗಿದ್ದಾರೆ.

ಮಾರ್ಪಳ್ಳಿ ಅವರು ಯಕ್ಷಗಾನವಲ್ಲದೆ ನಾಟಕ, ಸಿನೆಮಾ, ಸಂಗೀತಾ, ಶಿಲ್ಪ, ಸಾಹಿತ್ಯ ಹೀಗೆ ಕಲೆಯ ಬಹು ಆಯಾಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಬಹುಮುಖಿ ಕಲಾಸಾಧಕರಾಗಿದ್ದಾರೆ. ಪ್ರಶಸ್ತಿಯು ಪ್ರಶಸ್ತಿ ಪರಿಕರ ಸಹಿತ 40,000ರೂ. ನಗದು ಪುರಸ್ಕಾರವನ್ನು ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಮೇ 19ರ ರವಿವಾರ ಸಂಜೆ 5:00 ಗಂಟೆಗೆ ಯಕ್ಷಗಾನ ಕಲಾರಂಗದ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತಿಯಲ್ಲಿ ಅತಿಥಿ ಗಣ್ಯರ ಸಮಕ್ಷಮ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here