Home Uncategorized 'ಗೃಹಜ್ಯೋತಿ' ಯೋಜನೆ ಆಗಸ್ಟ್ 1ರಿಂದ ಜಾರಿ: ಯಾರಿಗೆ ಲಭ್ಯ, ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಇಲ್ಲಿದೆ...

'ಗೃಹಜ್ಯೋತಿ' ಯೋಜನೆ ಆಗಸ್ಟ್ 1ರಿಂದ ಜಾರಿ: ಯಾರಿಗೆ ಲಭ್ಯ, ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಇಲ್ಲಿದೆ ವಿವರ…

38
0

ರಾಜ್ಯದಲ್ಲಿ 200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುವ ಪ್ರತಿಯೊಬ್ಬರ ಮನೆಗೆ ಸರ್ಕಾರದಿಂದ ನೀಡಲಾಗುವ ‘ಗೃಹಜ್ಯೋತಿ’ ಯೋಜನೆಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಇಂಧನ ಸಚಿವ ಕೆ ಜೆ ಜಾರ್ಜ್ ಬೆಂಗಳೂರಿನ ಬೆಸ್ಕಾಂ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಗೃಹಜ್ಯೋತಿ ಯೋಜನೆಯನ್ನು ನಾಗರಿಕರು ಪಡೆಯುವುದು ಹೇಗೆ, ಯಾವ ರೀತಿ ಅರ್ಜಿ ಸಲ್ಲಿಸಬೇಕು, ಸರ್ಕಾರ ಹೊರಡ ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುವ ಪ್ರತಿಯೊಬ್ಬರ ಮನೆಗೆ ಸರ್ಕಾರದಿಂದ ನೀಡಲಾಗುವ ‘ಗೃಹಜ್ಯೋತಿ’ ಯೋಜನೆಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಇಂಧನ ಸಚಿವ ಕೆ ಜೆ ಜಾರ್ಜ್ ಬೆಂಗಳೂರಿನ ಬೆಸ್ಕಾಂ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಗೃಹಜ್ಯೋತಿ ಯೋಜನೆಯನ್ನು ನಾಗರಿಕರು ಪಡೆಯುವುದು ಹೇಗೆ, ಯಾವ ರೀತಿ ಅರ್ಜಿ ಸಲ್ಲಿಸಬೇಕು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.

ಆಗಸ್ಟ್ 1ರಿಂದ ಗೃಹಜ್ಯೋತಿ ಯೋಜನೆ ಜಾರಿಗೆ ಬರಲಿದ್ದು, ಜೂನ್ ತಿಂಗಳ ವಿದ್ಯುತ್ ಶುಲ್ಕವನ್ನು ನಾಗರಿಕರು ಕಡ್ಡಾಯವಾಗಿ ಪಾವತಿಸಬೇಕು. ಜುಲೈ ತಿಂಗಳ ಬಿಲ್ ಆಗಸ್ಟ್ ತಿಂಗಳಿನಲ್ಲಿ ಪಾವತಿ ಮಾಡುವುದು ಬೇಡ. ರಾಜ್ಯದಲ್ಲಿ 2.16 ಕೋಟಿ ಗ್ರಾಹಕರು 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದು 200 ಯೂನಿಟ್ ಗಿಂತ ಹೆಚ್ಚು ಬಳಕೆ ಮಾಡುವವರು 2 ಲಕ್ಷ ಮಂದಿಯಿದ್ದಾರೆ. ರಾಜ್ಯದ 2 ಕೋಟಿ 14 ಲಕ್ಷ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ತಿಳಿಸಿದರು.

12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಮೇಲೆ ಶೇಕಡಾ 10ರಷ್ಟು ಹೆಚ್ಚು ಬಳಕೆಗೆ ಅವಕಾಶ ನೀಡುತ್ತೇವೆ.ಸರಾಸರಿ ಬಳಕೆಗೆ ಶೇಕಡಾ 10ರಷ್ಟು ಸೇರಿಸಿ ಹೆಚ್ಚು ವಿದ್ಯುತ್ ನೀಡುತ್ತೇವೆ ಎಂದು ಸಚಿವರು ಹೇಳಿದರು. 

ಗೃಹಜ್ಯೋತಿ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು?: 200 ಯೂನಿಟ್ ಒಳಗೆ ವಿದ್ಯುತ್ ಬಳಸಿದರೆ ಮಾತ್ರ ಉಚಿತ ವಿದ್ಯುತ್ ಸೌಲಭ್ಯ ಜನತೆಗೆ ದೊರೆಯುತ್ತಿದ್ದು ಇದು ಗೃಹ ಬಳಕೆಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಬಳಕೆಗೆ ಇದು ಅನ್ವಯವಾಗುವುದಿಲ್ಲ. ಸ್ವಂತ ಮನೆ ಇರಲಿ, ಬಾಡಿಗೆ ಮನೆಯಿರಲಿ ಕರಾರು ಪತ್ರ ಕಡ್ಡಾಯವಾಗಿರುತ್ತದೆ. ಸೇವಾ ಸಿಂಧು ಪೋರ್ಟಲ್ ನ ಮೂಲಕ ಅರ್ಜಿ ಸಲ್ಲಿಸಬೇಕು.

LEAVE A REPLY

Please enter your comment!
Please enter your name here