Home Uncategorized ಗೃಹಜ್ಯೋತಿ ಯೋಜನೆ: 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

ಗೃಹಜ್ಯೋತಿ ಯೋಜನೆ: 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

7
0

ಗೃಹಜ್ಯೋತಿ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ವರ್ ಸಮಸ್ಯೆಯ ಮಧ್ಯೆಯೂ ಬುಧವಾರ (ಜೂನ್​ 21) ಸಂಜೆ ವೇಳೆಗೆ ಒಟ್ಟು 12.51 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು: ಗೃಹಜ್ಯೋತಿ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ವರ್ ಸಮಸ್ಯೆಯ ಮಧ್ಯೆಯೂ ಬುಧವಾರ (ಜೂನ್​ 21) ಸಂಜೆ ವೇಳೆಗೆ ಒಟ್ಟು 12.51 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.

ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆಯು ಜೂನ್‌ 18 ರಂದು ಆರಂಭಗೊಂಡಿತ್ತು. ಮೊದಲ ದಿನ – 96,305, ಎರಡನೆಯ ದಿನ- 3,34,845 ಮೂರನೇ ದಿನ 4,64,225 ಹಾಗೂ ನಾಲ್ಕನೇ ದಿನ (ಬುಧವಾರ) 3.56 ಲಕ್ಷ ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಇಂದಿನಿಂದ ರಾಜ್ಯದ ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಸಾರ್ವಜನಿಕರಿಗೆ ನೋಂದಣಿ ಮಾಡಲು ಪ್ರತ್ಯೇಕ ಲಾಗಿನ್ ಐಡಿ ಹಾಗೂ ಪ್ರತ್ಯೇಕ ಲಿಂಕ್ ಅನ್ನು ನೀಡಲಾಗಿದೆ. ಹಾಗಾಗಿ ಇಂದಿನಿಂದ ರಾಜ್ಯದ 2000 ವಿದ್ಯುಚ್ಛಕ್ತಿ ಕಚೇರಿಗಳಲ್ಲಿ ಗೃಹ ಜ್ಯೋತಿ ನೋಂದಣಿ ಪ್ರಕ್ರಿಯೆ ಸರಾಗವಾಗಿ ನಡೆಯಲಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು.

200 ಯೂನಿಟ್‌ ವರೆಗಿನ ಉಚಿತ ವಿದ್ಯುತ್‌ ಪಡೆಯುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ನೋಂದಣಿ ಪ್ರಕ್ರಿಯೆಯಲ್ಲಿ ದಿನೇ ದಿನೇ ಏರಿಕೆ ಕಂಡುಬರುತ್ತಿದ್ದು, ಸಾರ್ವಜನಿಕರು ಯೋಜನೆಯ ಪ್ರಯೋಜನ ಪಡೆಯಲು ಭಾರೀ ಉತ್ಸುಕತೆ ತೋರುತ್ತಿದ್ದಾರೆ.

ಕರ್ನಾಟಕ ಒನ್‌, ಬೆಂಗಳೂರು ಒನ್‌ ಹಾಗು ಗ್ರಾಮ ಒನ್‌ ಜೊತೆಗೆ, ಸಾರ್ವಜನಿಕರು ತಮ್ಮ ಕಂಪ್ಯೂಟರ್‌, ಲ್ಯಾಪ್‌ಟಾಪ್‌, ಮೊಬೈಲ್‌ ಫೋನ್‌ ಗಳಲ್ಲಿ ಹಾಗೂ ಕೆಲವು ವಿದ್ಯುತ್ ಕಚೇರಿಗಳಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ.

ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವನ್ನು ನಿಗದಿಪಡಿಸದ ಕಾರಣ ಗ್ರಾಹಕರು ಗಡಿಬಿಡಿಯಾಗದೇ, ಆತಂಕ ಪಡದೇ ಸೇವಾ ಸಿಂಧು ಪೋರ್ಟಲ್‌ https://sevasindhugs.karnataka.gov.in ಮೂಲಕ ನೋಂದಾಯಿಸಬಹುದು ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

ಈ ಯೋಜನೆಯು ಸರಳವಾದ ನೋಂದಣಿ ಪ್ರಕ್ರಿಯೆಯೊಂದಿಗೆ ರಾಜ್ಯದ ಎಲ್ಲಾ ಮನೆಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುವ ಗುರಿಯನ್ನು ಹೊಂದಿದೆ. ನೋಂದಣಿ ಮಾಡಿಕೊಳ್ಳಲು ಗ್ರಾಹಕರ ವಿದ್ಯುತ್ ಬಿಲ್‌, ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಮಾತ್ರ ಅಗತ್ಯವಿದೆ.

LEAVE A REPLY

Please enter your comment!
Please enter your name here