200 ಯೂನಿಟ್ ಒಳಗೆ ವಿದ್ಯುತ್ ಬಳಸುವ ರಾಜ್ಯದ ಎಲ್ಲಾ ನಾಗರಿಕರಿಗೂ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರಕಲಿದ್ದು ನಾಗರಿಕರು ಆದಷ್ಟು ಶೀಘ್ರವೇ ಅರ್ಜಿ ಸಲ್ಲಿಸಿದರೆ ಒಳ್ಳೆಯದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ. ಚಿಕ್ಕಮಗಳೂರು: 200 ಯೂನಿಟ್ ಒಳಗೆ ವಿದ್ಯುತ್ ಬಳಸುವ ರಾಜ್ಯದ ಎಲ್ಲಾ ನಾಗರಿಕರಿಗೂ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರಕಲಿದ್ದು ನಾಗರಿಕರು ಆದಷ್ಟು ಶೀಘ್ರವೇ ಅರ್ಜಿ ಸಲ್ಲಿಸಿದರೆ ಒಳ್ಳೆಯದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್(K J George) ತಿಳಿಸಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೃಹ ಜ್ಯೋತಿಗೆ(Gruha Jyothi) ಅರ್ಜಿ ಸಲ್ಲಿಸಲು ಡೆಡ್ ಲೈನ್ ಇಲ್ಲ, ಆದರೆ ಈ ತಿಂಗಳು ಉಚಿತ ವಿದ್ಯುತ್ ಸಿಗಬೇಕೆಂದರೆ ಜುಲೈ 25ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದರೆ ಆಗಸ್ಟ್ ತಿಂಗಳ ಬಿಲ್ ನಲ್ಲಿ ಶೂನ್ಯ ಬಿಲ್ ಎಂದು ಬರುತ್ತದೆ. ಇಲ್ಲದಿದ್ದರೆ ನಾಗರಿಕರು ಹಣ ಪಾವತಿ ಮಾಡಬೇಕಾಗುತ್ತದೆ ಎಂದರು.
ಇದನ್ನೂ ಓದಿ: ಗೃಹ ಜ್ಯೋತಿ ಯೋಜನೆ: 200 ಯುನಿಟ್ ಒಳಗಿದ್ದರೆ ಮಾತ್ರ ಉಚಿತ ವಿದ್ಯುತ್, ಜುಲೈ 1 ರಿಂದ ಜಾರಿ
86.5 ಲಕ್ಷ ಜನರಿಂದ ಅರ್ಜಿ: ಗೃಹ ಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತದೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್ ಜಾರಿಯಾಗಲಿದೆ. ಗೃಹಜ್ಯೋತಿಗೆ ಅರ್ಜಿ ಹಾಕದವರಿಗೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಆದಷ್ಟು ಬೇಗ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಒಳ್ಳೆಯದು ಎಂದರು.