ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ 2ನೇ ಖಾತರಿಯಾಗಿ ಜಾರಿಗೆ ಬಂದ ಗೃಹ ಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್ 18ರಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಯೋಜನೆಗೆ ಚಾಲನೆ ಸಿಕ್ಕಿದ ಎರಡು ವಾರಗಳ ನಂತರ ಬುಧವಾರ (ಜು.5) ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡವರ ಸಂಖ್ಯೆ ಒಂದು ಕೋಟಿ ದಾಟಿದೆ. ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ 2ನೇ ಖಾತರಿಯಾಗಿ ಜಾರಿಗೆ ಬಂದ ಗೃಹ ಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್ 18ರಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಮೊದಲ ದಿನ 96 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದರೆ, ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿತ್ತು. ಯೋಜನೆಗೆ ಚಾಲನೆ ಸಿಕ್ಕಿದ ಎರಡು ವಾರಗಳ ನಂತರ ಬುಧವಾರ (ಜು.5) ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡವರ ಸಂಖ್ಯೆ ಒಂದು ಕೋಟಿ ದಾಟಿದೆ.
ಗೃಹ ಜ್ಯೋತಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಗಡುವು ಇರುವುದಿಲ್ಲ ಮತ್ತು ಅರ್ಹ ಫಲಾನುಭವಿಗಳು ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು ಎಂದು ಇಂಧನ ಇಲಾಖೆ ತಿಳಿಸಿದೆ.
ಆದರೆ, ಜುಲೈ 25ರ ಮೊದಲು ಅರ್ಜಿ ಸಲ್ಲಿಸಿದವರಿಗೆ ಮಾತ್ರ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಸಿಗಲಿದೆ. ಆರಂಭಿಕ ದೋಷಗಳ ಹೊರತಾಗಿಯೂ, ನೋಂದಣಿ ಪ್ರಕ್ರಿಕೆಯೆಗೆ ಭರ್ಜರಿ ಪ್ರತಿಕ್ರಿಯೆ ಲಭ್ಯವಾಗಿದೆ.
ಈ ಯೋಜನೆಯಲ್ಲಿ ರಾಜ್ಯದ ಪ್ರತಿ ಮನೆಗಳಿಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ದೊರಕಲಿದೆ. ಯೋಜನೆಗೆ ಅರ್ಜಿ ಸಲ್ಲಿಸುವವರು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಕಚೇರಿಗಳಲ್ಲಿ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಮಾಡಬಹುದು.
ಇದನ್ನೂ ಓದಿ: ‘ಗೃಹ ಜ್ಯೋತಿ’ ಯೋಜನೆ ನೋಂದಣಿಗೆ 20 ರೂ.ಗಿಂತ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸರ್ಕಾರದ ಎಚ್ಚರಿಕೆ
ರಾಜ್ಯದ ಒಟ್ಟು 6 ವಿದ್ಯುತ್ ನಿಗಮಗಳಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ವೇಗ ಪಡೆದಿರುವ ಹಿನ್ನೆಲೆಯಲ್ಲಿ ನಿತ್ಯ ಕನಿಷ್ಠ 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸುತ್ತಿದ್ದಾರೆ. ಗೃಹ ಜ್ಯೋತಿ ನಿಯಮವು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯಿಸುತ್ತದೆ. ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್ ಉಪಯೋಗಿಸಿದ್ದಲ್ಲಿ ಯೋಜನೆ ಅನ್ವಯವಾಗುವುದಿಲ್ಲ.