ದೇವನಹಳ್ಳಿ;– ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದಾಗಿ ತೊಂದರೆ ಹಾಗೂ ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಗ್ಯಾರೆಂಟಿ ಯೋಜನೆಗಳಿಂದ ಲೋಡ್ ಶೆಡ್ಡಿಂಗ್ ಆಗುತ್ತಿದೆ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.
ವಿಶೇಷವಾಗಿ ರೈತ ಸ್ನೇಹಿಯಾಗಿರುವ ಟ್ರ್ಯಾಕ್ಟರ್ ಗಳ ಮುಖಾಂತರ ಮೆರವಣಿಗೆ ಮಾಡಿದ್ದು, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆವತಿಯಿಂದ ಪ್ರತಿಭಟನೆ ನಡೆದಿದೆ.
ನಗರದ ಟಿ.ಬಿ ಸರ್ಕಲ್ ನಿಂದ ಘೋಷಣೆಗಳನ್ನು ಕೂಗುತ್ತಾ ರೈತರು ಸಾಗಿದಿದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುಧ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಬೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಘಟನೆ ಜರುಗಿದೆ.
The post ಗ್ಯಾರಂಟಿ ಎಫೆಕ್ಟ್: ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತರಿಂದ ಪ್ರತಿಭಟನೆ appeared first on Ain Live News.
