: ಇಡೀ ದೇಶವೇ ಚಂದ್ರಯಾನ ಆರಂಭದ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಕೆಲವು ಚಿಂತಕರು ವ್ಯಕ್ತಪಡಿಸಿರುವ ಅಭಿಪ್ರಾಯ ಭಾರಿ ಚರ್ಚೆಗೆ ಕಾರಣವಾಗಿದೆ. ಅವರು ಚಂದ್ರಯಾನದ ಸಾಹಸವನ್ನು ಅಭಿನಂದಿಸಿದ್ದಾರೆ. ಬೆಂಗಳೂರು: ಇಡೀ ದೇಶವೇ ಚಂದ್ರಯಾನ ಆರಂಭದ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಕೆಲವು ಚಿಂತಕರು ವ್ಯಕ್ತಪಡಿಸಿರುವ ಅಭಿಪ್ರಾಯ ಭಾರಿ ಚರ್ಚೆಗೆ ಕಾರಣವಾಗಿದೆ. ಅವರು ಚಂದ್ರಯಾನದ ಸಾಹಸವನ್ನು ಅಭಿನಂದಿಸಿದ್ದಾರೆ.
ಆದರೆ, ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ ನಿಲುವನ್ನು ಆಕ್ಷೇಪಿಸಿದ್ದಾರೆ. ಆದರೆ, ಇದನ್ನು ಆಕ್ಷೇಪಿಸುವ ಖಂಡನಾ ಹೇಳಿಕೆಯಲ್ಲಿ ಎಡವಟ್ಟು ಮಾಡಿದ್ದಾರೆ. ಚಂದ್ರಯಾನ ಎಂದು ಹೇಳುವ ಬದಲು ಮಂಗಳಯಾನ ಎಂದಿದ್ದಾರೆ. ಈ ಎಡವಟ್ಟನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಮಾಡಲಾಗುತ್ತಿದೆ.
ಚಂದ್ರಯಾನ , ಮಂಗಳಯಾನದ ನಡುವಿನ ಅಂತರ ಗೊತ್ತಿಲ್ಲದ , ಎಲ್ಲದರ ಬಗ್ಗೆಯೂ ಅಭಿಪ್ರಾಯ ಹೊಂದಿರುವ , ಎಲ್ಲದರಲ್ಲೂ ಕಹಿ ಹರಡುವ ದೊಡ್ಡವರು ….!!!! pic.twitter.com/FwPVu3IdZF
— B L Santhosh (@blsanthosh) July 14, 2023
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ.ಎಲ್. ಸಂತೋಷ್ ಅವರು ಕೂಡಾ ಈ ಎಡವಟ್ಟನ್ನು ಗೇಲಿ ಮಾಡಿದ್ದಾರೆ. ಚಂದ್ರಯಾನಕ್ಕೂ ಮಂಗಳಯಾನಕ್ಕೂ ಇವರಿಗೆ ವ್ಯತ್ಯಾಸ ಗೊತ್ತಿಲ್ಲವೇ ಎಂದು ಕೇಳಿದ್ದಾರೆ.
ಎಡಪಂಥೀಯ ಚಿಂತಕರ ಈ ಅಭಿಪ್ರಾಯವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಗೇಲಿ ಮಾಡಿದ್ದಾರೆ. ಚಂದ್ರಯಾನ – ಮಂಗಳಯಾನದ ನಡುವಿನ ಅಂತರ ಗೊತ್ತಿಲ್ಲದ , ಎಲ್ಲದರ ಬಗ್ಗೆಯೂ ಅಭಿಪ್ರಾಯ ಹೊಂದಿರುವ , ಎಲ್ಲದರಲ್ಲೂ ಕಹಿ ಹರಡುವ ದೊಡ್ಡವರು ಎಂದು ಹೇಳಿದ್ದಾರೆ.