Home ಕರ್ನಾಟಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಡಿ.ಕೆ.ಸುರೇಶ್

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಡಿ.ಕೆ.ಸುರೇಶ್

36
0

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆಯ ಉಪಚುನಾವಣೆ ಸೇರಿದಂತೆ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಜನ ತಮಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇನೆ. ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇರಾದೆ ಇಲ್ಲ ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಪಕ್ಷ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದ ಅವರು, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಹೇಳಿಕೆಗೆ ತಾವು ಪ್ರಾಮುಖ್ಯತೆ ನೀಡುವುದಿಲ್ಲ. ನಟ, ನಿರ್ಮಾಪಕರಾಗಿರುವ ಅವರ ಹೇಳಿಕೆಗಳು ಯಾವಾಗ ಬೇಕಾದರೂ ಬದಲಾಗಬಹುದು. ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here