Home ಅಪರಾಧ Wife killed by mixing cyanide in ragi mudde | ರಾಗಿ ಮುದ್ದೆಯಲ್ಲಿ ಸೈನೆಡ್...

Wife killed by mixing cyanide in ragi mudde | ರಾಗಿ ಮುದ್ದೆಯಲ್ಲಿ ಸೈನೆಡ್ ಬೆರೆಸಿ ಪತ್ನಿ ಕೊಲೆ; ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಪತಿ

66
0
Chikmagalur | Wife killed by mixing cyanide in ragi lump; husband confessed to police

ಚಿಕ್ಕಮಗಳೂರು:

ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರುಂದ ಗ್ರಾಮದಲ್ಲಿ ಸೋಮವಾರ ರಾತ್ರಿ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಂಬಂಧಿಸಿದಂತೆ ಮೃತ ಮಹಿಳೆ ಶ್ವೇತಾ ಪತಿ ದರ್ಶನ್ ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿದ್ದ ಶ್ವೇತಾ ಹಾಗೂ ದರ್ಶನ್ ಕಲವು ದಿನಗಳ ಹಿಂದೆ ಮೂಡಿಗೆರೆ ತಾಲೂಕು ದೇವವೃಂದ ಗ್ರಾಮದ ಮನೆಗೆ ಬಂದಿದ್ದರು. ಮನೆಯಲ್ಲಿ ಶ್ವೇತಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ತರಾತುರಿಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಶ್ವೇತಾ ಕುಟುಂಬಸ್ಥರು ಇದು ಸಹಜ ಸಾವಲ್ಲ, ಇದೊಂದು ಕೊಲೆ ಎಂದು ಆರೋಪಿಸಿ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಗೋಣಿಬೀಡು ಪೊಲೀಸ್ ಠಾಣೆ ಪೊಲೀಸರು ದರ್ಶನ್‍ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದಾಗ ತಾನೇ ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ದರ್ಶನ್ ಲ್ಯಾಬ್ ಟೆಕ್ನಿಷಿಯನ್ ಆಗಿದ್ದು, ಲ್ಯಾಬ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬೆಂಗಳೂರಿನ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಅಕ್ರಮ ಸಂಬಂಧಕ್ಕೆ ಶ್ವೇತಾ ಅಡ್ಡಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ 4 ದಿನಗಳ ಹಿಂದೆ ದೇವರುಂದ ಗ್ರಾಮದ ಮನೆಗೆ ದರ್ಶನ್ ಹಾಗೂ ಶ್ವೇತಾ ದಂಪತಿ ಬಂದಿದ್ದು, ರಾತ್ರಿ ಊಟದ ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿದ ದರ್ಶನ್ ಪತ್ನಿ ಶ್ವೇತಾಗೆ ನೀಡಿದ್ದಾನೆ. ಮುದ್ದೆ ಸೇವಿಸಿ ಶ್ವೇತಾ ಸಾವನ್ನಪ್ಪಿದ ಮೇಲೆ ಸಿರೆಂಜ್‍ನಿಂದ ಇಂಜಕ್ಷನ್ ನೀಡಿದ್ದಾನೆ. ನಂತರ ಇಂಜೆಕ್ಷನ್ ತಗೆದುಕೊಂಡು ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದಾನೆ. ತಾನು ಮಾಡಿಕೊಂಡಿದ್ದ ಪ್ಲಾನ್ ಊಲ್ಟಾ ಆಗುತ್ತದೆ ಎಂದು ತಿಳಿದ ದರ್ಶನ್ ಶ್ವೇತಾ ಹೃದಯಾಘಾತದಿಂದ ಮೃತಪಟ್ಟಿದ್ದಾಳೆಂದು ಆಕೆಯ ಕುಟುಂಬಸ್ಥರಿಗೆ ತಿಳಿಸಿದ್ದಾನೆ. ಪ್ರಕರಣದ ಹಾದಿತಪ್ಪಿಸಲು ತರಾತುರಿಯಲ್ಲಿ ಮೃತದೇಹದ ಅಂತ್ಯಸಂಸ್ಕಾರಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದ್ದ ಎನ್ನಲಾಗಿದೆ.

ಮಗಳ ಸಾವಿನ ಸುದ್ದಿ ತಿಳಿದ ಕಳಸ ಮೂಲದ ಪೋಷಕರು, ಸಂಬಂಧಿಕರು ದೇವರುಂದ ಗ್ರಾಮಕ್ಕೆ ಆಗಮಿಸಿ ಶವಸಂಸ್ಕಾರವನ್ನು ತಡೆದಿದ್ದಾರೆ. ಇದು ಸಹಜ ಸಾವಲ್ಲ, ದರ್ಶನ್ ವಿಷದ ಇಂಜಕ್ಷನ್ ನೀಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆಸಲಾಗಿತ್ತು. ನಂತರ ಗೋಣಿಬೀಡು ಪೊಲೀಸರು ದರ್ಶನ್‍ನ್ ಹಾಗೂ ಆತನ ಅಣ್ಣನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ರಾತ್ರಿ ಊಟದ ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ತಾನೇ ಶ್ವೇತಳನ್ನು ಕೊಲೆ ಮಾಡಿರುವುದಾಗಿ ಶ್ವೇತಾ ಪತಿ ದರ್ಶನ್ ಒಪ್ಪಿಕೊಂಡಿದ್ದಾನೆಂದು ಹೇಳಲಾಗುತ್ತಿದೆ.

IPS officer Vikram Amte
IPS officer Vikram Amte (ಡಾ.ವಿಕ್ರಮ್ ಅಮಟೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ)

ಡಾ.ವಿಕ್ರಮ್ ಅಮಟೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಮಾತನಾಡಿ, ಶ್ವೇತಾ ಮೃತಪಟ್ಟಿರುವ ಪ್ರಕರಣ ಸಂಬಂಧ ಪತಿ ದರ್ಶನ್ ಅವರನ್ನು ಬಂಧಿಸಿ ಪೊಲೀಸ್ ವಿಚಾರಣೆಗೆ ಒಳಪಡಿಸಿದಾಗ ಯಾವುದೋ ರಾಸಾಯನಿಕವನ್ನು ಊಟದಲ್ಲಿ ಬೆರೆಸಿಕೊಟ್ಟಿರುವುದನ್ನು ಒಪ್ಪಿಕೊಂಡಿದ್ದಾನೆ. ಪ್ರಕರಣ ಸಂಬಂಧ ಎಫ್‍ಎಸ್ ಎಲ್ ವರದಿ ಎದುರು ನೋಡುತ್ತಿದ್ದೇವೆ. ಪ್ರಕರಣದ ಬಗ್ಗೆ ವಿಶೇಷ ತಂಡದಿಂದ ಸ್ಥಳ ಪರಿಶೀಲನೆಯನ್ನು ನಡೆಸಲಾಗಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆಯನ್ನು ಕೈಗೊಳ್ಳಲಾಗಿದೆ. ಪ್ರಕರಣದ ಎಲ್ಲ ತಪ್ಪಿತಸ್ಥರು ಬಂಧಿಸಲಾಗುವುದು ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here