Home Uncategorized ಚಿಕ್ಕಮಗಳೂರು: ವೇಗವಾಗಿ ಬಂದು ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್: ಓರ್ವ ವಿದ್ಯಾರ್ಥಿನಿ ಸಾವು;...

ಚಿಕ್ಕಮಗಳೂರು: ವೇಗವಾಗಿ ಬಂದು ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್: ಓರ್ವ ವಿದ್ಯಾರ್ಥಿನಿ ಸಾವು; ನಾಲ್ವರಿಗೆ ಗಾಯ

34
0

ಶಾಲಾ-ಕಾಲೇಜುಗಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ. ಚಿಕ್ಕಮಗಳೂರು: ಶಾಲಾ-ಕಾಲೇಜುಗಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ.

ಕಾವಲ್ ದುಗ್ಲಾಪುರ ಗೇಟ್‌ ಮಾರ್ಗವಾಗಿ ಅತಿ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಘಟನೆಯಲ್ಲಿ ತುಳಸಿ (15) ಮೃತಪಟ್ಟಿದ್ದಾಳೆ. ಇನ್ನು ನಿವೇದಿತ (14) ಸ್ಥಿತಿ ಗಂಭೀರವಾಗಿದ್ದು, ಇನ್ನೂ ನಾಲ್ವರು ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಹರಿದ ಬಸ್ ಕೊನೆಗೆ ಮನೆಯೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಮೇಲ್ಚಾವಣಿ ಸಂಪೂರ್ಣ ಜಖಂಗೊಂಡಿದೆ. ಗಂಭೀರ ಗಾಯಗೊಂಡಿರುವ ಮಕ್ಕಳನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮೆಟ್ರೋ ಪಿಲ್ಲರ್ ದುರಂತಕ್ಕೆ ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿ ನೌಕರರು ಹೊಣೆ

ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದ ಬಸ್ ಹಾನಿ ಮಾಡಿದೆ. ಚಾಲಕನ ನಿಯಂತ್ರಣ ತಪ್ಪಿ ಹೋಗಿರುವುದರಿಂದ ಈ ರೀತಿ ಅವಘಡವಾಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು, ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನೂ ಆಕ್ರೋಶಗೊಂಡ ಸ್ಥಳೀಯರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಖಾಸಗಿ ಬಸ್ ನಿರ್ವಾಹಕರು ಅತಿವೇಗದ ಹಾಗೂ ಅಪಾಯಕಾರಿಯಾಗಿ ಚಾಲನೆ ಮಾಡುತ್ತಿರುವುದನ್ನು ಅಧಿಕಾರಿಗಳು ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಮನಗರ: ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಆಸ್ಪತ್ರೆಯಲ್ಲಿ ನಾಲ್ಕನೇ ಮಗು ಸಾವು, ಕುಟುಂಬಸ್ಥರ ಪ್ರತಿಭಟನೆ

ಅತಿ ಹೆಚ್ಚು ವೇಗದ ಖಾಸಗಿ ಬಸ್ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಈ ರೀತಿಯಾಗಿದೆ.

LEAVE A REPLY

Please enter your comment!
Please enter your name here