Home Uncategorized ಚಿತ್ರದುರ್ಗ: ಸರ್ಕಾರಿ ಬಸ್​ ಮತ್ತು ಲಾರಿ ಮಧ್ಯೆ ಅಪಘಾತ- ಐವರ ಸಾವು; ಆ್ಯಕ್ಸಿಡೆಂಟ್ ನಂತರ 1...

ಚಿತ್ರದುರ್ಗ: ಸರ್ಕಾರಿ ಬಸ್​ ಮತ್ತು ಲಾರಿ ಮಧ್ಯೆ ಅಪಘಾತ- ಐವರ ಸಾವು; ಆ್ಯಕ್ಸಿಡೆಂಟ್ ನಂತರ 1 ಕಿ.ಮೀ ಸಾಗಿಬಂದ ಬಸ್ಸು!

27
0

ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್ – ಶ್ರೀರಂಗಪಟ್ಟಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ) ಕೆಎಸ್ ಆರ್ ಟಿಸಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.   ಹಿರಿಯೂರು: ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್ – ಶ್ರೀರಂಗಪಟ್ಟಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ) ಕೆಎಸ್ ಆರ್ ಟಿಸಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.  

ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45) , ಮಸ್ಕಿಯ ರಮೇಶ್(40)‌,  ರಾಯಚೂರಿನ ಮಾಬಮ್ಮ ಎಂದು ಗುರುತಿಸಲಾಗಿದೆ. ಇನ್ನೂ ಇಬ್ಬರ ಗುರುತು ಪತ್ತೆಯಾಗಿಲ್ಲ. ಬಸ್ ನಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಅವರೆಲ್ಲರನ್ನೂ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಿರಿಯೂರು ತಾಲೂಕಿಗೆ ಸೇರಿದ ಗೊಲ್ಲಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಕೊಡಗು: ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಲೈನ್ ಮ್ಯಾನ್ ದುರ್ಮರಣ

ಚಳ್ಳಕೆರೆಯಿಂದ ಹಿರಿಯೂರು ಕಡೆಗೆ ಬರುತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಹಿಂದೆ ಬಂದ ಲಾರಿ ಓವರ್ ಟೇಕ್ ಮಾಡುವಾಗ ಈ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್ ನ ಮುಂದಿನ ಸೀಟುಗಳಲ್ಲಿ ಕುಳಿತಿದ್ದ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

LEAVE A REPLY

Please enter your comment!
Please enter your name here